ಇಂದು ತುಮಕೂರಿನಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ಆಯೋಜಿಸಲಾಗಿದ್ದ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಉಪಾಧ್ಯಾಯ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು. ಈ ಸಂದರ್ಭದಲ್ಲಿ ಸಚಿವರಾದ ಜೆ ಸಿ ಮಾಧುಸ್ವಾಮಿ, ಡಾ.ಕೆ ಸುಧಾಕರ್, ಬಿ ಸಿ ನಾಗೇಶ್, ಸಂಸದ ಜಿಎಸ್ ಬಸವರಾಜ, ಶಾಸಕರಾದ ಜ್ಯೋತಿ ಗಣೇಶ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಸುರೇಶ ಗೌಡ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.