ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ನಗರಸಭೆಯ ಗಾಂಧಿಜಯಂತಿ ಅಂಗವಾಗಿ ಸ್ವಚ್ಛ ಭಾರತ ಅಭಿಯಾನವನ್ನು ಹಮ್ಮಿಕೊಂಡಿದ್ದು, ಗಂಗಾವತಿ ನಗರವನ್ನು ಪ್ಲಾಸ್ಟಿಕ್ ಮುಕ್ತ ನಗರವನ್ನಾಗಿ ಮಾಡಬೇಕೆಂದು, ನಗರಸಭೆಯಿಂದ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಲಾಗಿದೆ. ನಾಗರೀಕರು ಕಡ್ಡಾಯವಾಗಿ ಪ್ಲಾಸ್ಟಿಕ್ ಬಳಕೆಯನ್ನು ಮಾಡಬಾರದು. ಪ್ಲಾಸ್ಟಿಕ ಬಳಕೆಯಿಂದ ಆಗುವ ಪರಿಸರ ಹಾನಿ, ಆರೋಗ್ಯದ ಮೇಲೆ ಬೀರುವ ದುಷ್ಪರಿಣಾಮಗಳನ್ನು ವಿವರಿಸಿ, ನಗರಸಭೆಯ ಅಧಿಕಾರಿಗಳು ಹಾಗೂ ಮಾನ್ಯ ತಹಶೀಲ್ದಾರರು ಮತ್ತು ಕರವೇ ಜಿಲ್ಲಾ ಅಧ್ಯಕ್ಷರಾದ ಪಂಪಣ್ಣ ನಾಯಕ ಒಂದು ಕೆ.ಜಿ. ಪ್ಲಾಸ್ಟಿಕ್ ನ್ನು ತೆಗೆದುಕೊಂಡು ಒಂದು ಕೆ.ಜಿ. ಸಕ್ಕರೆಯನ್ನು ಕೊಡುವುದರ ಮುಖಾಂತರ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು.
ವರದಿಗಾರರು : ಅಂಬಣ್ಣ ನಾಯಕ