ಗೋಕಾಕ: ಎಸ್ಟಿ ಸಮುದಾಯಕ್ಕೆ ಶೇ.7.5 ರಷ್ಟು ಮೀಸಲಾತಿ ಕಲ್ಪಿಸಲು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಶೀಘ್ರ ಕ್ರಮ ಕೈಗೊಳ್ಳಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಒತ್ತಾಯಿಸಿದರು.
ಇಲ್ಲಿನ ಹಿಲ್ ಗಾರ್ಡನ್ ಗೃಹಕಚೇರಿಯಲ್ಲಿ ಇಂದು (ಮಂಗಳವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್ಟಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಿಸಲು ಪೂರಕವಾದ ವರದಿ, ದಾಖಲಾತಿ ಹಾಗೂ ಅಂಕಿಅಂಶಗಳು ಸರ್ಕಾರದ ಮುಂದಿವೆ. ಸರ್ಕಾರ ಸಂವಿಧಾನಾತ್ಮಕವಾಗಿ ನೀಡಬೇಕಾದ ಹಕ್ಕು ಇದಾಗಿದೆ. ಹೀಗಾಗಿ, ಮತ್ತೆ ವಿಳಂಬ ಮಾಡದೇ ಶೀಘ್ರ ಮೀಸಲಾತಿ ಒದಗಿಸಲು ರಾಜ್ಯ ಸರ್ಕಾರ ಮುಂದಾಗಬೇಕು ಎಂದರು.