ಮೈಸೂರು ಜಿಲ್ಲೆಯ ಎಲ್ಲಾ ಸಂಘ ಸಂಸ್ಥೆಯ ಪದಾಧಿಕಾರಿಗಳು, ಮುಖಂಡರು ಮತ್ತು ಜಿಲ್ಲಾಡಳಿತ ಭವನದಲ್ಲಿ ಮೈಸೂರು ಜಿಲ್ಲಾಧಿಕಾರಿ ಕಛೇರಿಯಲ್ಲಿ ಜಿಲ್ಲಾಧಿಕಾರಿಗಳಾದ ಮಾನ್ಯ ಗೌತಮ್ ಬಗಾದಿ ರವರ ನೇತೃತ್ವದಲ್ಲಿ ವಾಲ್ಮೀಕಿ ಜಯಂತಿ ಆಚರಣೆ ಕುರಿತ ಪೂರ್ವಭಾವಿ ಸಭೆ ನಡೆಸಲಾಯಿತು. ಈ ಸಂದರ್ಭದಲ್ಲಿ ಪರಿಶಿಷ್ಟ ವರ್ಗಗಳ ಇಲಾಖೆಯ ಅಧಿಕಾರಿ ಕುಮಾರಿ ಪ್ರಭ ರವರು, ನಗರ ಪಾಲಿಕೆ ಉಪಯುಕ್ತರು, ವಾಲ್ಮೀಕಿ ನಿಗಮ ವ್ಯವಸ್ಥಾಪಕರಾದ ಮಲ್ಲೇಶ್ ರವರು, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿಗಳು, ಮತ್ತು ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.