ಚಿಕ್ಕೋಡಿ: ತಾಲೂಕಿನ ವಾಳಕಿ ಗ್ರಾಮದಲ್ಲಿ ಇಂದು ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಹಾಗೂ ದಸರಾ ನಿಮಿತ್ಯವಾಗಿ ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪರಸು ನಾಯಕ್ ಇವರ ನೇತೃತ್ವದಲ್ಲಿ ಕಬ್ಬಡ್ಡಿ ಪಂದ್ಯಾವಳಿಯನ್ನು ಆಯೋಜಿಸಲಾಗಿತ್ತು. ಈ ಸಮಾರಂಭದಲ್ಲಿ ಕಬಡ್ಡಿ ಪಂದ್ಯಾವಳಿಯ ಉದ್ಘಾಟಕರಾಗಿ ಯುವ ನಾಯಕ ರಾಹುಲ್ ಜಾರಕಿಹೊಳಿ ಆಗಮಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಇದೆ ಸಂದರ್ಭದಲ್ಲಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಿಪ್ಪಾಣಿ ಮಾಜಿ ಶಾಸಕರಾದ ಕಾಕಾಸಾಹೇಬ ಪಾಟೀಲರು ವಹಿಸಿದರು. ಹಾಗೂ ಪಟ್ಟಣಕುಡಿ ಗ್ರಾಮ ಪಂಚಾಯತ ಮಾಜಿ ಅಧ್ಯಕ್ಷರು ಹಾಗೂ ಕಾಂಗ್ರೆಸ ಪಕ್ಷದ ಯುವ ದುರೀಣರಾದ ವಿದ್ಯಾಧರ ಕಾಗೆ, ಪರಸು ನಾಯಿಕ, ವಿಲಾಸ ನಾಯಿಕ, ಮಹದೇವ ನಾಯಿಕ, ಹಾಗೂ ಗ್ರಾಮ ಪಂಚಾಯತ ಸದ್ಯಸ್ಯರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.