ಯಲಹಂಕ : ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ಅಟ್ಟೂರು ಶಾಖೆ ಉದ್ಘಾಟನೆ ಹಾಗೂ ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಬಿಡಿಎ ಅಧ್ಯಕ್ಷ, ಶಾಸಕ ಎಸ್ ಆರ್ ವಿಶ್ವನಾಥ್ ಮುಖ್ಯ ಅಥಿತಿಯಾಗಿ ಪಾಲ್ಗೊಂಡು, ಮಹರ್ಷಿ ವಾಲ್ಮೀಕಿಯವರ ತತ್ವಾದರ್ಶಗಳು, ಧರ್ಮೋಪದೇಶ ಕುರಿತು ಮಾತನಾಡಿದರು.
ವಾಲ್ಮೀಕಿ ಜಯಂತ್ಯೋತ್ಸವದ ಅಂಗವಾಗಿ ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪಾರ್ಚನೆ, ವಿವಿಧ ಜಾನಪದ ಕಲಾತಂಡಗಳ ನೃತ್ಯ ಪ್ರದರ್ಶನದಲ್ಲಿ ಮೆರವಣಿಗೆ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಆಯೋಜಿಸಿದ್ದರು.
ಕಾರ್ಯಕ್ರಮದಲ್ಲಿ ವಾಲ್ಮೀಕಿ ಮಹಾ ಸಂಸ್ಥಾನ ಶಿಡ್ಲೇಕೋಣದ ಪೀಠಾಧ್ಯಕ್ಷರಾದ ಶ್ರೀ ಸಂಜಯ ಕುಮಾರ ಸ್ವಾಮೀಜಿ, ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ಬೆಂ.ನಗರ ಮತ್ತು ಗ್ರಾಮಾಂತರ ಜಿಲ್ಲಾಧ್ಯಕ್ಷ ಸಿಂಗಾಪುರ ವೆಂಕಟೇಶ್, ಬೆಂ.ನಗರ ಜಿಲ್ಲಾ ಬಿಜೆಪಿ ಎಸ್ ಟಿ ಮೋರ್ಚಾ ಅಧ್ಯಕ್ಷ ಎ ಸಿ ಮುನಿಕೃಷ್ಣಪ್ಪ, ಸಮುದಾಯದ ಮುಖಂಡರಾದ ಅಟ್ಟೂರು ಚಂದ್ರು ಸೇರಿದಂತೆ ಇನ್ನಿತರ ಗಣ್ಯರಿದ್ದರು.