ಗದಗ: ಸಾಲ , ಸಹಾಯಧನ ಸೌಲಭ್ಯಕ್ಕೆ ಅರ್ಜಿ ಆಹ್ವಾನಸಾಲ , ಸಹಾಯಧನ ಸೌಲಭ್ಯಕ್ಕೆ ಅರ್ಜಿ ಆಹ್ವಾನ


ಗದಗ ನವೆಂಬರ್ ೨೯: ೨೦೨೧-೨೨ ನೇ ಸಾಲಿನಲ್ಲಿ ಸವಿತಾ ಸಮಾಜಕ್ಕೆ ಸೇರಿದ ಪರಿಯಾಳ, ಅಂಬಟ್ಟನ್, ಬಜಂತ್ರಿ, ಬಂಡಾರಿ, ಚೌರಿಯ, ಹಡಪದ, ಕವುಟಿಯನ್, ಕೆಲಸಿ, ಕ್ಷೌರಿಕ, ಕ್ಷೌರದ್, ಮಹಾಲೆ, ಮಂಗಳ, ಮೇಲಗಾರ, ನಾಡಿಗ, ನಾಪಿತ, ನವಲಿಗ್, ನಾವಿ, ನಯನಜ ಕ್ಷತ್ರೀಯ, ನ್ಹಾವಿ, ವಾಜಾಂತ್ರಿ, ಸವಿತ, ನಯನಜ ಕ್ಷತ್ರಿ, ನಾಡಿಗ್, ಕ್ಷೌರಿಕ್, ಕ್ಷೌರಿಕ ಜನರ ಆರ್ಥಿಕ ಅಭಿವೃದ್ಧಿಗಾಗಿ ಸಾಂಪ್ರದಾಯಿಕ ವೃತ್ತಿದಾರರ ಸಾಲ ಯೋಜನೆ ಹಾಗೂ ಸ್ವಯಂ ಉದ್ಯೋಗ ಸಾಲ ಯೋಜನೆಯಲ್ಲಿ ಸಾಲ ಮತ್ತು ಸಹಾಯಧನ ಸೌಲಭ್ಯ ಪಡೆಯಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಈ ಯೋಜನೆಗಳಲ್ಲಿ ಸೌಲಭ್ಯ ಪಡೆಯಲು ಇಚ್ಛಿಸುವ ಅರ್ಜಿದಾರರು ಈ ಹಿಂದಿನಂತೆಯೆ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ರೂ.ನಂ: ೨೦೨, ೨ನೇ ಮಹಡಿ, ಜಿಲ್ಲಾ ಆಡಳಿತ ಭವನ, ಗದಗ ಜಿಲ್ಲೆ ಹಾಗೂ ಆಯಾ ತಾಲೂಕಿನ ವಿಸ್ತೀರ್ಣಾಧಿಕಾರಿಗಳು, ಹಿಂದುಳಿದ ವರ್ಗಗಳ ಇಲಾಖೆ, ಮತ್ತು ನಿಗಮದ ವೆಬ್‌ಸೈಟ್ WWW.dbcdc.karnataka.gov.in ಜಿಲ್ಲಾ ಕಛೇರಿ ದೂರವಾಣಿ ಸಂ: ೦೮೩೭೨-೨೩೨೩೨೭ ನ್ನು ಸಂಪರ್ಕಿಸಿ ಅರ್ಜಿ ನಮೂನೆಗಳನ್ನು ಪಡೆದು ಅಗತ್ಯ ದಾಖಲಾತಿಗಳನ್ನು ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ/ದಾಖಲಾತಿಗಳೊಂದಿಗೆ ದಿನಾಂಕ : ೧೦-೦೧-೨೦೨೨ ರೊಳಗೆ ಸಲ್ಲಿಸಬಹುದಾಗಿದೆ.

Discover more from Valmiki Mithra

Subscribe now to keep reading and get access to the full archive.

Continue reading