ಗದಗ: ಜಿಲ್ಲೆಯ ಶಿರಹಟ್ಟಿ ತಾಲೂಕಿನ ಎಫ್. ಎಮ್. ಡಬಾಲಿ ಪ್ರೌಢಶಾಲೆಯಲ್ಲಿ ಗುರುವಾರ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನವನ್ನು ಹಮ್ಮಿಕೊಳ್ಳಲಾಯಿತು. ತಾಲೂಕು ಆಡಳಿತ ವೈದ್ಯಾಧಿಕಾರಿ ಡಾ|| ವೆಂಕಟೇಶ ರಾಠೋಡ್ ಕಾರ್ಯಕ್ರಮ ಉದ್ಘಾಟಿಸಿ ರಕ್ತಹೀನತೆಯನ್ನು ಹೋಗಲಾಡಿಸಲು ಜಂತುಹುಳು ನಿವಾರಣೆ ಮಾತ್ರೆಯನ್ನು ಎಲ್ಲರೂ ಸೇವಿಸಬೇಕೆಂದರು.
ಈ ಕಾರ್ಯಕ್ರಮ ಕುರಿತು ಮಹೇಶ ಎನ್.ಸಿ.ಡಿ. ಆಪ್ತ ಸಮಾಲೋಚಕರು ಪ್ರಾಸ್ತವಿಕವಾಗಿ ಮಾತನಾಡಿದರು.
ಮುಖ್ಯ ಅತಿಥಿಗಳಾಗಿ ಉಪಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶ್ರೀಮತಿ ಗೀತಾ ಕಾಂಬಳೆ ಆಗಮಿಸಿದ್ದರು. ಅಧ್ಯಕ್ಷತೆಯನ್ನು ಪ್ರಧಾನ ಗುರುಗಳಾದ ಬಟಕುರ್ಕಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ, ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಹಾಗೂ ಡಬಾಲಿ ಪ್ರೌಢಶಾಲೆಯ ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿ ವಿದ್ಯಾರ್ಥಿನಿಯರು ಭಾಗವಹಿಸಿದ್ದರು.