ಗದಗ ನವೆಂಬರ್ 30: ವಿಶ್ವ ಏಡ್ಸ್ ದಿನಾಚರಣೆಯನ್ನು ನಾಳೆ ಬೆಳಿಗ್ಗೆ 10.30 ಗಂಟೆಗೆ ಗದಗ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.

ಜಿಲ್ಲಾಧಿಕಾರಿ ಎಂ.ಸುಂದರೇಶ್‌ಬಾಬು ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಮ್ಸ್ ಸಮುದಾಯ ಆರೋಗ್ಯ ವಿಭಾಗದ ಡಾ. ಅರವಿಂದ ಕರಿನಾಗಣ್ಣವರ ಉಪನ್ಯಾಸ ನೀಡಲಿದ್ದು, ಮುಖ್ಯ ಅತಿಥಿಗಳಾಗಿ ಜಿಲ್ಲಾ ಪೊಲೀಸ ವರಿಷ್ಟಾದಿಕಾರಿ ಶಿವಪ್ರಕಾಶ ದೇವರಾಜ , ಉಪ ಅರಣ್ಯ ಸಂರಕ್ಷಣಾಧಿಕಾರಿ ದೀಪಿಕಾ ಬಾಜಪೈ , ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಸ್.ಜಿ. ಸಲಗೆರೆ, ರೆಡ್ ಕ್ರಾಸ್ ಸಂಸ್ಥೆಯ ಕಾರ್ಯದರ್ಶಿ ಡಾ.ಎಂ.ಡಿ.ಸಾಮುದ್ರಿ , ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ ಬಸರಿಗಿಡದ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಬಿ.ಸಿ. ಕರಿಗೌಡ್ರ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಜಗದೀಶ ನುಚ್ಚಿನ್ , ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ವೈ.ಕೆ. ಭಜಂತ್ರಿ, ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ. ಅರುಂಧತಿ ಕೆ, ಜಿಲ್ಲಾ ಆರ್.ಸಿ.ಎಚ್. ಅಧಿಕಾರಿ ಡಾ.ಬಿ.ಎಂ.ಗೊಜನೂರ, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ. ಎಸ್.ಎಸ್. ನೀಲಗುಂದ, ಜಿಲ್ಲಾ ಕುಷ್ಟರೋಗ ನಿರ್ಮೂಲನಾಧಿಕಾರಿ ಡಾ. ರಾಜೇಂದ್ರ ಸಿ. ಬಸರಿಗಿಡದ, ತಾಲೂಕಾ ಆರೋಗ್ಯಾಧಿಕಾರಿ ಡಾ. ಪ್ರೀತ ಖೋನಾ ಪಾಲ್ಗೊಳ್ಳುವರು.
ಕಾರ್ಯಕ್ರಮಕ್ಕೂ ಮುನ್ನ ಬೆ 9.00 ಗಂಟೆಗೆ ಗಾಂಧೀ ವೃತ್ತದಿಂದ ಬೈಕ್ ರ‍್ಯಾಲಿ ಆರಂಭವಾಗಿ ಭೂಮ ರೆಡ್ಡಿ ವೃತ್ತ, ಹಳೆ ಡಿಸಿ ಆಫೀಸ್ ವೃತ್ತ , ಮುಳಗುಂದ ನಾಕಾ ಮಾರ್ಗವಾಗಿ ಡಿ.ಸಿ. ಆಫೀಸ್ ತಲುಪಲಿದೆ.