ಮಸ್ಕಿ: ಪಕ್ಷವು ಪ್ರಾಮಾಣಿಕ ಜನಪರ ರಾಜಕಾರಣಕ್ಕಾಗಿ ದುಡಿಯುವ ಹಾಗೂ ಜನರ ಸಮಸ್ಯೆಗಳಿಗೆ ಸ್ಪಂದಿಸುವ ನಾಲ್ಕು ಅಭ್ಯರ್ಥಿಗಳನ್ನು ಚುನಾವಣೆ ಕಣದಲ್ಲಿ ನಿಲ್ಲಿಸಿದೆ ಎಂದು ಕೆಆರ್ ಎಸ್ ಪಕ್ಷದ ರಾಜ್ಯಧ್ಯಕ್ಷ ರವಿ ಕೃಷ್ಣಾರೆಡ್ಡಿ ಹೇಳಿದರು.
ಬುಧವಾರ ಮಸ್ಕಿ ಪುರಸಭೆ ಚುನಾವಣೆ ಪ್ರಚಾರ ಕಾರ್ಯಕ್ರಮದಲ್ಲಿ ಮಸ್ಕಿ ಪಟ್ಟಣದಲ್ಲಿ ಅಶೋಕ ವೃತ್ತಕ್ಕೆ ಹೂವಿನ ಮಾಲಾರ್ಪಣೆ ಮಾಡುವ ಮೂಲಕ ಕಾರ್ಯಕ್ರಮ ಆರಂಭಿಸಿದರು…
ಇದೇ ಸಂದರ್ಭದಲ್ಲಿ ಮಾತನಾಡಿದ ಕೃಷ್ಣಾರೆಡ್ಡಿ ಅವರು, ಮುಂದಿನ ಹಂತದಲ್ಲಿ ಮಸ್ಕಿ ಕ್ಷೇತ್ರದ ಅಭಿವೃದ್ಧಿಗಾಗಿ ಕೆಆರ್ ಎಸ್ ಪಕ್ಷದ ಅಭ್ಯರ್ಥಿಗಳನ್ನು ಬೆಂಬಲಿಸುವಂತೆ ಮತದಾರರನ್ನು ಕೋರಿದರು. 10,16,17,21 ಈ ನಾಲ್ಕು ವಾರ್ಡ್ ನಲ್ಲ್ಲಿ ಪ್ರಚಾರ ನಡೆಸಿದರು.
ಇದೇ ಸಂದರ್ಭದಲ್ಲಿ ಪಕ್ಷದ ರಾಜ್ಯ ಎಸ್ಸಿ,ಎಸ್ಟಿ ಘಟಕದ ಅಧ್ಯಕ್ಷ ಓಬಲೇಶಪ್ಪ ಉಪಾಧ್ಯಕ್ಷ ಆನಂದ, ರಾಯಚೂರು ಜಿಲ್ಲಾ ಯುವ ಘಟಕದ ಅಧ್ಯಕ್ಷ ನಿರುಪಾದಿ ಗೋಮರ್ಸಿ, ಜಿಲ್ಲಾ ಕಾನೂನು ಸಲಹೆಗಾರ ಸುಬ್ಬರಾವ್, ಹಾವೇರಿ ಜಿಲ್ಲಾ ಅಧ್ಯಕ್ಷ ಮಲ್ಲಿಕಾರ್ಜುನ ಜಾಲಿ ಹಾಗೂ ಪಕ್ಷದ ಎಲ್ಲಾ ಕಾರ್ಯಕರ್ತರು ಭಾಗವಹಿಸಿದ್ದರು.