ಬೆಂಗಳೂರು: ಎಂಇಎಸ್ ಸಂಘಟನೆ ನಿಷೇಧಿಸುವಂತೆ ಒತ್ತಾಯಿಸಿ ಡಿಸೆಂಬರ್ 31 ರಂದು ಕರ್ನಾಟಕ ಬಂದ್ಗೆ ಕನ್ನಡಪರ ಸಂಘಟನೆಗಳು ಕರೆ ನೀಡಿವೆ.ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಬುಧವಾರ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಎಂಇಎಸ್ ಪುಂಡಾಟಿಕೆ ವಿರುದ್ಧ ಸರ್ಕಾರ ಕ್ರಮಕೈಗೊಳ್ಳಬೇಕು. ಬೆಳಗಾವಿಯಲ್ಲಿ ಕನ್ನಡ ಧ್ವಜ, ಕನ್ನಡಿಗರ ಪ್ರತಿಮೆಗಳಿಗೆ ರಕ್ಷಣೆ ನೀಡಬೇಕು. ಬೆಳಗಾವಿ ಮತ್ತು ಗಡಿ ಗ್ರಾಮಗಳಲ್ಲಿ ಕನ್ನಡಿಗರಿಗೆ ರಕ್ಷಣೆ ಒದಗಿಸಬೇಕು. ಕನ್ನಡ ಹೋರಾಟಗಾರರ ಮೇಲಿನ ಪ್ರಕರಣಗಳನ್ನು ಹಿಂಪಡೆಯಬೇಕು ಎಂಬುದು ಸೇರಿದಂತೆ ಪ್ರಮುಖ ವಿಷಯಗಳ ಬಗ್ಗೆ ಚರ್ಚೆ ನಡೆಸಲಾಯಿತು . ಹೋಟೆಲ್ ಗಳ ಬೆಂಬಲ ಸಿಕ್ಕಿಲ್ಲ, ಹೊಸ ವರ್ಷದ ಆಚರಣೆ ಹಿನ್ನೆಲೆ ಹೋಟೆಲ್ ಬಂದ್ ಸಾಧ್ಯವಿಲ್ಲ ಎಂದು ನಗರ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಪಿಸಿ ರಾವ್ ತಿಳಿಸಿದ್ದಾರೆ
ಅಗತ್ಯ ವಸ್ತುಗಳು ಲಭ್ಯ: ಡಿಸೆಂಬರ್ 31ರಂದು ಕರ್ನಾಟಕ ಬಂದ್ ಇದ್ದರೂ ಜನರಿಗೆ ಹಾಲು, ಪೇಪರ್, ಆರೋಗ್ಯ ಸೇವೆಗಳು ಸೇರಿದಂತೆ ಅಗತ್ಯ ವಸ್ತುಗಳು ಮಾರುಕಟ್ಟೆಯಲ್ಲಿ ಸಿಗುತ್ತವೆ. ಇದಕ್ಕೆ ಯಾವುದೇ ರೀತಿಯ ತೊಂದರೆಯಾಗುವುದಿಲ್ಲ. ಇನ್ನು ಹೊಸ ವರ್ಷ ಮುನ್ನಾದಿನವಾಗಿದ್ದು, ಹೊಸ ವರ್ಷಾಚರಣೆ ಮಾಡುವವರು ಹೇಗಿದ್ದರೂ ಸಾಯಂಕಾಲವಲ್ಲವೇ ಮಾಡುವುದು, ಹಾಗಾಗಿ ಹೊಸ ವರ್ಷ ಸಂಭ್ರಮಾಚರಣೆಗೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ಸಂಘಡನೆಗಳು ತಿಳಿಸಿವೆ.