ಸಂಕ್ರಾಂತಿಗೆ ಹೊಸ ಸಿಎಂ. ಡಿಸಿಎಂ, ಬಿಜೆಪಿಯಲ್ಲಿ ಮತ್ತೆ ಶುರುವಾಯ್ತಾ ಬದಲಾವಣೆಯ ಪರ್ವ..?

ಬೆಂಗಳೂರು: ಮುಖ್ಯಮಂತ್ರಿ ಸ್ಥಾನದಿಂದ ಸದ್ಯದಲ್ಲಿಯೇ ಸಿಎಂ ಬಸವರಾಜ ಬೊಮ್ಮಾಯಿಯವರು ಕೆಳಗಿಳಿಯುತ್ತಾರೆ ಎಂಬ ಊಹಾಪೋಹಗಳು ಬಿಜೆಪಿ ಪಕ್ಷದಲ್ಲಿ ಕೇಳಿಬರುತ್ತೀದೆ.

ಬೊಮ್ಮಾಯಿಯವರು ಇತ್ತೀಚೆಗೆ ತಮ್ಮ ಹುಟ್ಟೂರು ಹಾವೇರಿ ಜಿಲ್ಲೆಯ ಶಿಗ್ಗಾಂವ್ ತಾಲ್ಲೂಕಿನಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ಮುಖ್ಯಮಂತ್ರಿ ಹುದ್ದೆ ಸೇರಿದಂತೆ ಯಾವ ಹುದ್ದೆಯೂ ಶಾಶ್ವತವಲ್ಲ, ನಮ್ಮ ಸಮಯ ಬಂದಾಗ ಕೆಳಗಿಳಿಯಲೇಬೇಕು ಎಂದು ಭಾವನಾತ್ಮಕವಾಗಿ ಮಾತನಾಡಿದ್ದರು. ಅಲ್ಲಿಂದ ಮುಖ್ಯಮಂತ್ರಿ ಹುದ್ದೆಯಿಂದ ಅವರು ಸದ್ಯದಲ್ಲಿ ಕೆಳಗಿಳಿಯುತ್ತಾರೆ ಎಂಬ ಊಹಾಪೋಹಗಳು, ಮಾತುಗಳು ಕೇಳಿಬರುತ್ತಿವೆ.

ಮುಖ್ಯಮಂತ್ರಿ ಬದಲಾವಣೆಯಾದ ನಂತರ ಡಿಸಿಎಂ ಉದ್ದೆಯಲ್ಲಿಯು ಬದಲಾವಣೆಗಳು ಕಂಡು ಬರುವ ಸಾಧ್ಯತೆ ಇದೆ. ಅಷ್ಟೇ ಅಲ್ಲದೆ ಜಾತಿಗೊಬ್ಬರು ಉಪಮುಖ್ಯಮಂತ್ರಿ ಎಂಬಂತೆ ಹಂಚಿಕೆ ಮಾಡುವ ಸಾಧ್ಯತೆ ಇದೆ. ಈ ವಿಚಾರವಾಗಿ ಬಿಜೆಪಿ ನಾಯಕರನ್ನ ಪ್ರಶ್ನೆ ಮಾಡಿದರೆ ಕಾದು ನೋಡುವ ಎಂಬ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಆದರೆ ಬಿಜೆಪಿ ವಲಯದಲ್ಲಿ ಈ ರೀತಿಯ ಮಾತುಗಳು ಕೇಳಿಬರುತ್ತಿದೆ.

ಈ ನಡುವೆ ರಾಜ್ಯದಲ್ಲಿ ಸಂಕ್ರಾಂತಿ ಬಳಿಕ ರಾಜಕೀಯ ಕ್ರಾಂತಿಯಾಗಲಿದೆ ಎಂದು ಹೇಳಲಾಗುತ್ತಿದೆ. ಸಿಎಂ ಬಸವರಾಜ ಬೊಮ್ಮಾಯಿಯವರಿಗೆ ಮಂಡಿನೋವು ಮತ್ತು ಆರೋಗ್ಯದ ಸಮಸ್ಯೆಯೂ ಇರುವುದರಿಂದ ನಾಯಕತ್ವ ಬದಲಾವಣೆ ಮಾಡಬೇಕಾಗಬಹುದು. ಅಲ್ಲದೇ ಯಡಿಯೂರಪ್ಪರವರಿಗೂ ರಾಜ್ಯದಲ್ಲಿ ಉನ್ನತ ಹುದ್ದೆ ನೀಡಿ ಮುಂಬರುವ ಚುನಾವಣೆಗೆ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಲು ಹೈ ಕಮಾಂಡ್ ಪ್ಲ್ಯಾನ್ ಮಾಡುತ್ತಿದೆ.

ಈ ನಡುವೆ ರಾಜ್ಯಕ್ಕೆ ಮಹಿಳಾ ಸಿಎಂ ನೀಡುವ ಬಗ್ಗೆಯೂ ಚರ್ಚೆಯಾಗ್ತಿದೆ ಎನ್ನಲಾಗುತ್ತಿದ್ದು, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಈ ಪಟ್ಟ ಒಲಿಯುತ್ತದೆ ಎಂದು ಹೇಳಲಾಗುತ್ತಿದೆ.

Discover more from Valmiki Mithra

Subscribe now to keep reading and get access to the full archive.

Continue reading