ತುಮಕೂರು: ರೂಪಾಂತರಿ ಕೋವಿಡ್ ವೈರಸ್ ಬಹಳ ವೇಗವಾಗಿ ಹರಡುತ್ತಿದೆ ಆದರೆ ಎಚ್ಚರವಾಗಿರಿ ಎಂದು ಹೇಳಬೇಕಾದ ಆರೋಗ್ಯ ಇಲಾಖೆಯವರು ನಿರ್ಲಕ್ಷ್ಯ ವಹಿಸುತ್ತಿರುವುದು ಕಂಡುಬಂದಿದೆ.
ಕೊವಿಡ್ ಎರಡನೇ ಅಲೆಯಲ್ಲಿ ಡೆಲ್ಟಾ ವೈರಸ್ ವ್ಯಾಪಕವಾಗಿ ಹರಡಿತ್ತು ಈಗ ಹೊಸದಾಗಿ ಒಮಿಕ್ರೋನ್ ಕಾಣಿಸಿಕೊಂಡಿದೆ. ಈಗಾಗಲೇ ಅನೇಕ ಜಿಲ್ಲೆಗಳಲ್ಲಿ ಇದು ಕಾಣಿಸಿಕೊಂಡಿದ್ದು ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮವಾಗಿ ಸಾಕಷ್ಟು ನಿಗಾ ವಹಿಸಿದ್ದಾರೆ.
ಸದ್ಯ ನಿನ್ನೆಯಷ್ಟೇ ತುಮಕೂರಿನ ಶೆಟ್ಟಿಯಲ್ಲಿ ರಾಘವೇಂದ್ರ ಮಠದ ಎದುರುಗಡೆ ಇರುವಂತಹ ಏರಿಯಾದಲ್ಲಿ ಒಮಿಕ್ರೋನ್ ಕಾಣಿಸಿಕೊಂಡಿದೆ ಎಂದು ಸುದ್ದಿಯಾಗಿತ್ತು, ಇದಕ್ಕೆ ಪುಷ್ಟಿ ನೀಡುವಂತೆ ಅಧಿಕಾರಿಗಳು ವರ್ತಿಸುತ್ತಿದ್ದಾರೆ.
ಇದೀಗ ಶೆಟ್ಟಿಹಳ್ಳಿ ಸುತ್ತಮುತ್ತ ಇರುವ ಏರಿಯಾದಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿದ್ದಾರೆ. ಮತ್ತು ಸುತ್ತಮುತ್ತ ಇರುವ ಮನೆಗಳಲ್ಲಿ ಸ್ವಾಬ್ ಸ್ಯಾಂಪಲ್ ತೆಗೆದುಕೊಂಡು ಹೋಗಿದ್ದಾರೆ. ಮತ್ತು ಜನಗಳು ಅನಾವಶ್ಯಕವಾಗಿ ಓಡಾಡಬಾರದು ಎಂಬ ಎಚ್ಚರಿಕೆಯನ್ನು ನೀಡಿದ್ದಾರೆ.
ಶೆಟ್ಟಿಹಳ್ಳಿ ಸಿಲ್ ಡೌನ್ ಮಾಡಲಾಗಿದೆ ಎಂದು ಸುಳ್ಳು ಸುದ್ದಿ ಕಾಡ್ಗಿಚ್ಚಿನಂತೆ ಹಬ್ಬಿದೆ ಯಾವುದೇ ಒಮಿಕ್ರೋನ್ ಪ್ರಕರಣ ಪತ್ತೆಯಾಗಿಲ್ಲ ಎಂದು ಡಿಎಚ್ ಒ. ಡಾ.ನಾಗೇಂದ್ರ ಸ್ಪಷ್ಟನೆ ನೀಡಿದ್ದಾರೆ. ಪ್ರಕರಣ ಪತ್ತೆಯಾಗಿಲ್ಲ ಎಂದ ಮೇಲೆ ಶೆಟ್ಟಿಹಳ್ಳಿ ಸುತ್ತಮುತ್ತ ರೆಡ್ ಅಲರ್ಟ್ ಘೋಷಣೆ ಮಾಡುವ ಅವಶ್ಯಕತೆ ಏನಿತ್ತು ಎನ್ನುವುದು ಸಾರ್ವಜನಿಕರ ಪ್ರಶ್ನೆಯಾಗಿದೆ. ಸಾರ್ವಜನಿಕರಿಗೆ ಪ್ರವೇಶ ನಿಷೇಧಿಸಲಾಗಿದೆ ಎಂಬ ಬೋರ್ಡನ್ನು ಯಾವ ಕಾರಣಕ್ಕೆ ಹಾಕಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಬೇಕಿದೆ.
ಇಷ್ಟೆಲ್ಲ ಏನುಕ್ಕೆ ಮಾಡಿದ್ದಾರೆ ಎಂಬುದು ಖಚಿತ ಮಾಹಿತಿಯಿಲ್ಲ. ಹೀಗಾಗಿ ಆರೋಗ್ಯ ಇಲಾಖೆಯವರು ಅಲ್ಲಿ ಏನಾಗಿದೆ ಎಂಬ ಮಾಹಿತಿಯನ್ನು ಅಧಿಕೃತವಾಗಿ ಪ್ರಕಟಣೆಯ ಮೂಲಕ ತಿಳಿಸಬೇಕೆಂದು ಅಲ್ಲಿಯ ಜನರ ಒತ್ತಾಯವಾಗಿದೆ