ತುಮಕೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ವಿರುದ್ಧ ದಾಖಲೆ ಜಿಲ್ಲಾಧಿಕಾರಿಗಳಿಗೆ ತುಮಕೂರು ಜಿಲ್ಲಾ ವಾಲ್ಮೀಕಿ ಸಮುದಾಯದ ನಾಯಕ ಮುಖಂಡರುಗಳು ಸೇರಿ ದೂರು ಸಲ್ಲಿಸಿದರು ಕೂಡ ವಾರ ಕಳೆದರೂ ಇಲ್ಲಿಯವರೆಗೆ ಯಾವುದೇ ಕ್ರಮ ಕೈಗೊಳ್ಳದಿರುವುದು ಸಾರ್ವಜನಿಕ ವಲಯದಲ್ಲಿ ಸಂಶಯಕ್ಕೆ ಎಡೆಮಾಡಿಕೊಟ್ಟಿದೆ.
ಮಾನ್ಯ ಜಿಲ್ಲಾಧಿಕಾರಿಗಳು ಮಾನ್ಯ ಜಿಲ್ಲಾ ಪಂಚಾಯತ್ ಸಿಇಓ ಅವರಿಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಯಾವುದೇ ಕ್ರಮ ಕೈಗೊಳ್ಳದಿರುವ ಕಾರಣ ಇಂದು ಸಿಇಓ ಅವರನ್ನು ಬಾಲಭವನ ಎಂ ಜಿ ರಸ್ತೆ ತುಮಕೂರು ಇಲ್ಲಿ ಭೇಟಿ ಮಾಡಿ ಕ್ರಮ ಕೈಗೊಳ್ಳುವುದರ ಬಗ್ಗೆ ಚರ್ಚಿಸುವ ಸಂದರ್ಭದಲ್ಲಿ ಅವರು ನಾನು ಏನು ಮಾಡಬೇಕೆಂದು ನನಗೆ ತಿಳಿದಿದೆ ನಿಮ್ಮಿಂದ ನಾನು ಪಾಠ ಕಲಿಯಬೇಕಿಲ್ಲ ನಾವು ಮಾಡುತ್ತೇವೆ ಸಮಯ ಬೇಕು ಎಂಬ ಉಡಾಫೆಯ ಉತ್ತರವನ್ನು ನೀಡಿದ್ದಾರೆ ಎಂದು ಆರೋಪಿಸಿದರು.
ಇತ್ತೀಚೆಗಷ್ಟೇ ಅಂಬೇಡ್ಕರ್ ಅಭಿವೃದ್ಧಿ ನಿಗಮ ಹಾಗೂ ದೇವರಾಜ ಅರಸು ವಿದ್ಯಾರ್ಥಿನಿಲಯಗಳಲ್ಲಿ ಅಧಿಕಾರಿಗಳ ಭ್ರಷ್ಟಾಚಾರ ನಡೆದ ಅನುಮಾನಗಳು ಅಧಿಕಾರಿಗಳು ಅಮಾನತ್ತು ಆಗಿರುವ ಉದಾಹರಣೆಗಳು ಇದ್ದರೂ ಕೂಡ ಅಧಿಕಾರಿಗಳ ಪರ ಮೇಲಾಧಿಕಾರಿಗಳು ರಕ್ಷಣೆಗೆ ನಿಂತ ಮೇಲೆ ಬೇಲಿಯೇ ಎದ್ದು ಹೊಲ ಮೇದಂತೆ ಆಗಿದೆ. ದಲಿತ ಸಮುದಾಯದ ಅಭಿವೃದ್ಧಿಗೆ ಎಂದು ಇರುವ ನಿಗಮಗಳಲ್ಲಿ ಇರುವ ಅಲ್ಪಸ್ವಲ್ಪ ಹಣದಲ್ಲಿ ಲಂಚಾವತಾರ ನಡೆಯುತ್ತಿರುವ ಆರೋಪ ದಾಖಲೆ ಸಮೇತ ಸಲ್ಲಿಸಿದರು ಕೂಡ ಯಾವುದೇ ಕ್ರಮ ಕೈಗೊಳ್ಳದಿರುವುದು ಸಾರ್ವಜನಿಕ ವಲಯದಲ್ಲಿ ಸಂಶಯಕ್ಕೆ ಎಡೆಮಾಡಿಕೊಟ್ಟಿದೆ.
ಜಿಲ್ಲಾ ಆಡಳಿತವು ಈ ಕೂಡಲೇ ಇದನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ವಾಲ್ಮೀಕಿ ಸಮುದಾಯದ ಹಿರಿಯ ಮುಖಂಡರಾದ ಪಾಳೆಗಾರರು ಕಿಡಿಕಾರಿದ್ದಾರೆ.