ದೇವದುರ್ಗ: ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ ಸ್ಥಳದಲ್ಲೇ ಪರಿಹಾರ ನೀಡುವ ಕಾರ್ಯ ಮಾಡುತ್ತಿರುವ ಶಾಸಕರಾದ ಕೆ. ಶಿವನಗೌಡ ನಾಯಕರ ಕಾರ್ಯಕ್ಕೆ ಶ್ಲಾಘನೀಯ ವ್ಯಕ್ತವಾಗಿದೆ.
ಕಷ್ಟ ಎಂದು ಬಂದ ಜನಸಾಮಾನ್ಯರ ನೋವುಗಳಿಗೆ ಸ್ಪಂದಿಸಿ ಸಂಕಷ್ಟದಲ್ಲಿರುವವರಿಗೆ ಸಹಾಯ ಹಸ್ತ ಚಾಚುತ್ತಿರುವ ಶಾಸಕರು ಎಂದು ಹೆಸರುವಾಸಿಯಾಗಿದ್ದಾರೆ. ದಿನ್ಯ ನಿತ್ಯ ಜನಗಳ ಮಧ್ಯೆ ಬೆರೆಯುವ ಇವರು ನಿರುದ್ಯೋಗ ಸಮಸ್ಯೆ ಹಾಗೂ ತಮ್ಮ ಸುತ್ತಮುತ್ತಲಿನ ಗ್ರಾಮವನ್ನು ಅಭಿವೃದ್ಧಿ ಮಾಡುವುದು, ಕುಡಿಯುವ ನೀರಿನ ಸಮಸ್ಯೆ ಸೇರಿದಂತೆ ಅನೇಕ ಸಮಸ್ಯೆಗಳನ್ನು ಆಲಿಸಿ, ಪರಿಹರಿಸುವ ಕಾರ್ಯ ಮಾಡುತ್ತಿದ್ದಾರೆ.
ಇದಷ್ಟೇ ಅಲ್ಲದೆ ಕಷ್ಟ ಎಂದು ಬಂದ ಜನಸಾಮಾನ್ಯರ ನೋವುಗಳಿಗೆ ಸ್ಪಂದಿಸಿ ಸಂಕಷ್ಟದಲ್ಲಿರುವವರಿಗೆ ಸಹಾಯ ಹಸ್ತ ನೀಡುತ್ತಿದ್ದಾರೆ.