ಚಿಕ್ಕಬಳ್ಳಾಪುರ: ಗುಡಿಬಂಡೆ ತಾಲ್ಲೂಕಿನ ಹಂಪಸಂದ್ ನ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಲಕ್ಷ್ಮೀನಾರಾಯಪ್ಪ ಮತ್ತು ಅಭಿವೃದ್ದಿ ಅಧಿಕಾರಿ ಪಣೀಂದ್ರ ಇವರಿಬ್ಬರು ಸೇರಿ ಸರ್ಕಾರದ ಸುತ್ತೋಲೆಗಳನ್ನು ಪರಿಗಣಿಸದೆ ಮತ್ತು ಗ್ರಾ.ಪಂ.ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೋಳ್ಳದೆ ಗ್ರಾಮ ಪಂಚಾಯಿತಿಯ ಅಭಿವೃದ್ದಿಗೆ ಬಂದಿರುವ ಅನುದಾನ 50ಲಕ್ಷದ ಚೆಕ್ ಗಳನ್ನು ಬರೆದು ಹಣವನ್ನು ಡ್ರಾ ಮಾಡಿದ್ದಾರೆಂದು ಆರೋಪಿಸಿ ಪ್ರಜಾ ಸಂಘರ್ಷ ಸಮಿತಿ ಮತ್ತು ಸಿಪಿಎಂ ಕಾರ್ಯಕರ್ತರು ಗುಡಿಬಂಡೆ ತಾ.ಪಂ.ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.
ಇನ್ನೂ ಪ್ರತಿಭಟನೆಯ ನೇತೃತ್ವವಹಿಸಿ ಮಾತನಾಡಿದ ಕಾರ್ಯಕರ್ತರು, ಸರ್ಕಾರದಿಂದ ಬಿಡುಗಡೆಯಾದ ಅನುದಾನವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಅವರ ಮೇಲೆ ಸ್ಥಳಿಯ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಬೇಕೆಂದು ಆಗ್ರಹಿಸಿದರು.
ಸ್ಥಳಕ್ಕೆ ತಾ.ಪಂ.ಇ.ಓ.ಬಂದು ಈ ಬಗ್ಗೆ ಸಂಬಂಧಪಟ್ಟ ಮೇಲಾಧಿಕಾರಿಗಳಿಗೆ ವರದಿಯನ್ನು ಸಲ್ಲಿಸಿ ತಪ್ಪಿತಸ್ಥರ ಮೇಲೆ ಕಾನೂನುಕ್ರಮ ಜರುಗಿಸಲಾಗುವುದೆಂದು ತಿಳಿಸಿದರು. ಪ್ರತಿಭಟನೆಯಲ್ಲಿ ಪ್ರಜಾ ಸಂಘರ್ಷಸಮಿತಿ ಮತ್ತು ಸಿಪಿಎಂ ಕಾರ್ಯಕರ್ತರು ಭಾಗವಹಿಸಿದ್ದರು.