ಶಿರಹಟ್ಟಿ: ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಭರತ್ ಪಿ ನಾಯಕ್ ರವರು ಇಂದು ಶಿರಹಟ್ಟಿಯಲ್ಲಿ ಭೂ ಸಂಪತ್ತು ಸಂರಕ್ಷಣಾ ಸಮಿತಿ ಸಂಯುಕ್ತ ಆಶ್ರಯದಲ್ಲಿ ಜರುಗಿದ ಉಚಿತ ನೇತ್ರ ತಪಾಸಣಾ ಶಿಬಿರದ ಉದ್ಘಾಟನೆಯನ್ನು ನೆರವೇರಿಸಿದರು.
ಉಚಿತ ನೇತ್ರ ತಪಾಸಣಾ ಶಿಬಿರಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳ ಕಾರ್ಯಕ್ಕೆ ಗ್ರಾಮಸ್ಥರು ಮತ್ತು ಸಾರ್ವಜನಿಕರು ಸಾಥ್ ನೀಡಿದರು.
ಇದೇ ವೇಳೆ ಮಾತನಾಡಿದ ಭರತ್ ಪಿ ನಾಯಕ್ ಅವರು, ಕಣ್ಣಿನ ಸಮಸ್ಯೆ ಇರುವಂಥವರು ಬಂದು ಉಚಿತವಾಗಿ ಕಣ್ಣಿನ ತಪಾಸಣೆಯನ್ನು ಮಾಡಿಕೊಳ್ಳಬೇಕು ಎಂದು ಮನವಿ ಮಾಡಿದರು.