ಬೆಂಗಳೂರು: ಪವರ್ ಸ್ಟಾರ್’ ಪುನೀತ್ ರಾಜ್‌ಕುಮಾರ್ ಅವರ ಮೊದಲ ಕಂಚಿನ ಪುತ್ಥಳಿ ಬಿಬಿಎಂಪಿಯ ಕೇಂದ್ರ ಕಚೇರಿ ಆವರಣದಲ್ಲಿ ಪ್ರತಿಷ್ಠಾಪನೆಗೊಳ್ಳಲಿದೆ.
ಕೇಂದ್ರ ಕಚೇರಿ ಆವರಣದಲ್ಲಿರುವ ಡಾ.ರಾಜ್ಕುಮಾರ್ ಗಾಜಿನ ಮನೆ ಮುಂಭಾಗವಿರುವ ಮೇಯರ್ ಮುತ್ತಣ್ಣ ಡಾ.ರಾಜ್ಕುಮಾರ್ ಪ್ರತಿಮೆ ಪಕ್ಕದಲ್ಲಿ ಪವರ್ ಸ್ಟಾರ್ ಪುನಿತ್ ರಾಜ್ಕುಮಾರ್ ಅವರ ಪ್ರತಿಮೆ ಪ್ರತಿಷ್ಠಾಪಿಸಲು ಬಿಬಿಎಂಪಿ ಅಡಳಿತಾಧಿಕಾರಿ ರಾಕೇಶ್ ಸಿಂಗ್ ಅವರು ಅನುಮತಿ ನೀಡಿದ್ದಾರೆ.
ಪುನೀತ್ ರಾಜ್ ಕುಮಾರ್ ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಚಲನಚಿತ್ರಗಳನ್ನು ನಟಿಸಿದರು. ಅವರ ಸರಳತೆ, ಸಮಾಜ ಸೇವೆ ಇಡಿ ದೇಶದ ಗಮನ ಸೆಳಿಯಿತು. ಸಾವಿನಲ್ಲಿಯೂ ಸಾರ್ಥಕ ಜೀವನ ಎಂಬಂತೆ ನೇತ್ರದಾನ ಮಾಡಿ ಅಂಧರ ಬಾಳಿಗೆ ಬೆಳಕಾದರು. ಅತಿ ಕಿರಿಯ ವಯಸ್ಸಿನಲ್ಲಿ, ಹಿರಿಯ ಸಾಧನೆ ಮಾಡಿದ. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಜೀವನ, ಆದರ್ಶಗಳ ಮಾರ್ಗದರ್ಶನದಲ್ಲಿ ನಾವು ಸಾಗಬೇಕು.