ಚಂಡೀಗಢ: ಮೋದಿ ಸಮಸ್ಯೆ ಅನುಭವಿಸಿದ್ದು ಕೇವಲ 15 ನಿಮಿಷಗಳಷ್ಟೇ, ರೈತರು ಒಂದು ವರ್ಷ ಪ್ರತಿಭಟಿಸಿದ್ದಾರೆ ಎಂದು ಪಂಜಾಬ್ ರಾಜ್ಯದ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ವ್ಯಂಗ್ಯವಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ರೈತ ಸಹೋದರರು ದೆಹಲಿ ಗಡಿಯಲ್ಲಿ ಒಂದು ವರ್ಷದಿಂದ ಪ್ರತಿಭಟನೆ ನಡೆಸಿದ್ದರು. ಒಂದೂವರೆ ವರ್ಷ ಅಲ್ಲಿಯೇ ಮೊಕ್ಕಾಂ ಹೂಡಿದ್ದರು ಎಂದಿದ್ದಾರೆ.