ವದ್ದಟ್ಟಿ: ಗ್ರಾಮದಲ್ಲಿ 2021-_22ನೇ ಸಾಲಿನ ಲೋಕೋಪಯೋಗಿ ಇಲಾಖೆಯ ಪ್ರಗತಿ ಕಾಲೋನಿ ಯೋಜನೆ ಎಸ್ ಟಿ ಕಾಲೋನಿ ಯೋಜನೆ, ರಸ್ತೆ ಮತ್ತು ಚರಂಡಿ ನಿರ್ಮಾಣದ ಅಭಿವೃದ್ದಿ ಕಾಮಗಾರಿಯನ್ನು ಸುಮಾರು 30 ಲಕ್ಷ ರೂಪಾಯಿ ವೆಚ್ಚದಲ್ಲಿ ಭೂಮಿ ಪೂಜೆಯನ್ನು ಶಾಸಕರಾದ ಜೆ. ಎನ್ ಗಣೇಶ್ ನೆರವೇರಿಸಿದರು.
ಹಾಗೂ ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿಗಳನ್ನು ಮಾಡಬೇಕೆಂದು ತಿಳಿಸಿದರು. ಈ ಸಂದರ್ಭದಲ್ಲಿ ಕುರುಗೋಡು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಭಂಗಿ ಮಲ್ಲಯ್ಯ , ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ವದ್ದಟ್ಟಿ ಗ್ರಾಮ ಪಂಚಾಯಿತಿ ಸದಸ್ಯರು, ಮುಖಂಡರು ,ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಿದರು.