ಮಾನ್ವಿ: ತಾಲೂಕಿನ ಸರ್ಕಾರಿ ಆಸ್ಪತ್ರೆಯ ಆರೋಗ್ಯ ಇಲಾಖೆಯ ಸಭಾಂಗಣದಲ್ಲಿ ನಡೆದ ಭಾರತ ಬಯೋಟಿಕನ್ ಮೂರನೇ ಹಂತದ ಕೋವಿಡ್ ಲಸಿಕೆಯನ್ನು ಆರೋಗ್ಯ ಕಾರ್ಯಕರ್ತರಿಗೆ ಹಾಗೂ 60 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮವನ್ನು ಸಸಿಗೆ ನೀರೆರೆಯುವ ಮೂಲಕ ಶಾಸಕರದ ಸನ್ಮಾನ್ಯ ಶ್ರೀ ರಾಜಾ ವೆಂಕಟಪ್ಪ ನಾಯಕ ದೊರೆ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು, ಕೇಂದ್ರ ಹಾಗೂ ರಾಜ್ಯ ಸರ್ಕಾರ ಹಂತಹಂತವಾಗಿ, ವ್ಯಾಕ್ಸಿನ್ ಅಭಿಯಾನ ನಡೆಸುತ್ತಿದೆ, ಮೊದಲಿಗೆ ಆರೋಗ್ಯ ಸಿಬ್ಬಂದಿಗಳಿಗೆ, ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡಿದ ಬಳಿಕ, 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಲಸಿಕೆ ನೀಡಲಾಗುತ್ತಿದೆ. ಮುಂದಿನ ಈ ಹಂತದಲ್ಲಿ ನಿರ್ದಿಷ್ಟ ಕಾಯಿಲೆಗಳಿಂದ ಬಳಲುತ್ತಿರುವ 45 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುತ್ತಿದೆ.ಮುಂದಿನ ಹಂತದಲ್ಲಿ 20 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡುವ ವೈದ್ಯರ ತಜ್ಞರ ತಂಡ ಶಿಫಾರಸು ಮಾಡಿದೆ.
ಸರ್ಕಾರ ಹಂತಹಂತವಾಗಿ ವ್ಯಾಕ್ಸಿನ್ ಅಭಿಯಾನ ನಡೆಸುತ್ತಿದೆ . ಆದ್ದರಿಂದ ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಆರೋಗ್ಯ ಸಿಬ್ಬಂದಿ ,ಅಂಗನವಾಡಿ- ಆಶಾ ಕಾರ್ಯಕರ್ತರು ಹಾಗೂ ಅಸ್ವಸ್ಥತೆ ಹೊಂದಿದ ಅರುವತ್ತು ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಲಸಿಕೆಯನ್ನು ಪಡೆದು ಕೋವಿಡ್-19 ತಡೆಗಟ್ಟಬೇಕಾದರೆ ಪ್ರತಿಯೊಬ್ಬರೂ ಲಸಿಕೆಯನ್ನು ಪಡೆದು ಸರ್ಕಾರದ ಮಾರ್ಗಸೂಚಕ ಗಳನ್ನು ಪಾಲಿಸಬೇಕೆಂದು ಶಾಸಕರು ಕರೆ ನೀಡಿದರು.
ಈ ಸಂದರ್ಭದಲ್ಲಿ ಮಾನ್ವಿ ತಹಶೀಲ್ದಾರರಾದ ಶ್ರೀ ಪರಶುರಾಮ್ ಹಾಗೂ ಮಾನ್ವಿ ಪ್ರಭಾರಿ ತಹಶೀಲ್ದಾರರಾದ ಶ್ರೀ ಅಬ್ದುಲ್ ವಾಹಿದ್ ತಾಲೂಕು ಆರೋಗ್ಯ ವೈದ್ಯಾಧಿಕಾರಿಗಳಾದ ಶ್ರೀ ಚಂದ್ರಶೇಖರಯ್ಯ ಸ್ವಾಮಿ ಹಾಗೂ ತಾಲೂಕು ಆರೋಗ್ಯ ಆಸ್ಪತ್ರೆಯ ಎಲ್ಲಾ ವೈದ್ಯರು ಹಾಗೂ ಆಸ್ಪತ್ರೆಯ ಸಿಬ್ಬಂದಿ ಹಾಗೂ ಈ ಯೋಜನೆಯ ಸದುಪಯೋಗವನ್ನು ಪಡೆದುಕೊಳ್ಳಲು ಆಗಮಿಸಿದರು 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು, ಸಾರ್ವಜನಿಕರು ಹಾಗೂ ಮಾನ್ವಿ ಪುರಸಭೆ ಸದಸ್ಯರು ಉಪಸ್ಥಿತರಿದ್ದರು.