ಕನಕಪುರ: ಮೇಕೆದಾಟು ಯೋಜನೆಯನ್ನು ಕೂಡಲೇ ಕೈಗೆತ್ತಿಕೊಳ್ಳುವಂತೆ ಕರ್ನಾಟಕ ಸರ್ಕಾರವನ್ನು ಆಗ್ರಹಿಸಲು ಕಾಂಗ್ರೆಸ್ ಪಕ್ಷ ಜನವರಿ 9 ರಿಂದ 19 ರ ವರೆಗೆ ಪಾದಯಾತ್ರೆ ಹಮ್ಮಿಕೊಂಡಿದೆ. ಮೇಕೆದಾಟುವಿನಿಂದ ಬೆಂಗಳೂರು ತನಕ ಪಾದಯಾತ್ರೆ ನಡೆಯಲಿದೆ.
ಮೇಕೆದಾಟು ಯೋಜನೆಗಾಗಿ ಕಾಂಗ್ರೆಸ್ ಹಮ್ಮಿಕೊಂಡಿರುವ ಎರಡನೇ ದಿನದ ಪಾದಯಾತ್ರೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಪಾಲ್ಗೊಂಡು ಸೋಮವಾರ ಹೆಜ್ಜೆ ಹಾಕಿದರು.
ದೊಡ್ಡಾಲಹಳ್ಳಿಯಿಂದ ಆರಂಭವಾದ ಪಾದಯಾತ್ರೆ ಕನಕಪುರ ಕಡೆಗೆ ಸಾಗಿತು. ಈ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮಾಜಿ ಸಚಿವ ರಾಮಲಿಂಗಾ ರೆಡ್ಡಿ, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಶಾಸಕಿಯರಾದ ಲಕ್ಷ್ಮಿ ಹೆಬ್ಬಾಳಕರ್, ಅಂಜಲಿ ನಿಬಾಳ್ಕರ್, ಶಾಸಕ ಮಹಾಂತೇಶ್ ಕೌಜಲಗಿ, ಶಾಸಕ ಗಣೇಶ ಹುಕ್ಕೇರಿ, ಬೆಳಗಾವಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಕಿಸಾನ್ ಜಿಲ್ಲಾಧ್ಯಕ್ಷ ಕಲ್ಲಪ್ಪ ಲಕ್ಕಾರ್, ಕಾಂಗ್ರೆಸ್ ಕಿಸಾನ್ ರಾಜ್ಯ ಸಂಚಾಲಕ ರಾಜೇಂದ್ರ ಪಾಟೀಲ್, ವಿಜಯಕುಮಾರ ಹುಣಶ್ಯಾಳ ಸೇರಿದಂತೆ ಅನೇಕ ಕಾಂಗ್ರೆಸ್ ಕಾರ್ಯಕರ್ತರು ಇದ್ದರು.