ನೆಲಮಂಗಲ: ಪ್ರಧಾನಿ ನರೇಂದ್ರ ಮೋದಿ ಅವರ ಸುರಕ್ಷತೆ ವಿಚಾರದಲ್ಲಿ ಚೆಲ್ಲಾಟವಾಡಿದ ಪಂಜಾಬ್ ಕಾಂಗ್ರೆಸ್ ಮುಖ್ಯಮಂತ್ರಿ ವಿರುದ್ಧ ಇಂದು ಬಿಜೆಪಿ ಯುವ ಮೋರ್ಚಾ ದಿಂದ ಎಂ ರಾಮು ಅವರ ನೇತೃತ್ವದಲ್ಲಿ ಪ್ರತಿಭಟನೆ ಮಾಡಿ ಪ್ರತಿಕೃತಿ ದಹನ ಮಾಡಲಾಯಿತು.
ಭಾರತದ ಪ್ರಧಾನಿ ನರೇಂದ್ರ ಮೋದಿ ಪಂಜಾಬ್‌ನಲ್ಲಿ 15 ನಿಮಿಷಗಳ ಕಾಲ ಫ್ಲೈ ಓವರ್‌ನಲ್ಲಿ ಸಿಲುಕಿದ್ದರು. ಈ ವಿಚಾರ ಈಗ ರಾಜಕೀಯ ಆರೋಪ ಪ್ರತ್ಯಾರೋಪಗಳಿಗೆ ಕಾರಣವಾಗಿದೆ. ಪ್ರಧಾನಿ ಸಾಗುವ ಮಾರ್ಗದಲ್ಲಿ ಪ್ರತಿಭಟನೆಗಳು ನಡೆಯಲಿವೆ ಎಂಬ ಗುಪ್ತಚರ ಇಲಾಖೆ ವರದಿಯನ್ನು ಪಂಜಾಬ್ ಸರ್ಕಾರ ನಿರ್ಲಕ್ಷ್ಯ ಮಾಡಿತ್ತು ಮತ್ತು ಬದಲಿ ಮಾರ್ಗದ ವ್ಯವಸ್ಥೆಯನ್ನು ಸಹ ಪೊಲೀಸರು ಮಾಡಿರಲಿಲ್ಲ.