ಬೀದರ್ : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ರಾಜ್ಯ ಸರ್ಕಾರವು ಕೋವಿಡ್ ನಿಯಂತ್ರಣಕ್ಕೆ ಸಾಕಷ್ಟು ಬಿಗಿ ಕ್ರಮಗಳನ್ನು ಕೈಗೊಂಡಿದ್ದು, ಈ ನಡುವೆ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿ ಕೋವಿಡ್ ನಿಯಮಗಳನ್ನು ಉಲ್ಲಂಘನೆ ಮಾಡಿದ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್ ವಿರುದ್ಧ ದೂರು ದಾಖಲಾಗಿದೆ.
ಸಾಮಾಜಿಕ ಕಾರ್ಯಕರ್ತ ಬಂಟಿ ದರಬಾರೆ ಔರಾದ್ ಠಾಣೆಗೆ ದೂರು ನೀಡಿದ್ದು, ಕೊರೊನಾ ಹೆಚ್ಚಳವಾಗುತ್ತಿರುವ ಸಮಯದಲ್ಲಿ ಎಕ್ಕಂಬಾ ಗ್ರಾಮದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಸಚಿವ ಪ್ರಭು ಚವ್ಹಾಣ್ ಭಾಗಿಯಾಗಿದ್ದಾರೆ. ಈ ವೇಳೆ ಕೊವೀಡ್ ನಿಯಮಗಳನ್ನು ಉಲ್ಲಂಘನೆ ಮಾಡಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದಾರೆ.