ನಾನು ಮೇಕೆದಾಟು ಯೋಜನೆಯ ಬಗ್ಗೆ ನಿಮ್ಮೆಲ್ಲರ ವಿಶ್ವಾಸದೊಂದಿಗೆ ಅನುಷ್ಠಾನಕ್ಕಾಗಿ ಬೇಕಾಗಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಲು ಸಿದ್ದನಿದ್ದೇನೆ.
ಕೊರೊನಾ ಮಹಾಮಾರಿಯ ಮೂರನೇ ಅಲೆಯು ತೀವ್ರವಾಗಿ ಅಪ್ಪಳಿಸಿರುವ ಹಿನ್ನೆಲೆಯಲ್ಲಿ ಜನಜೀವನ ವಿಶೇಷವಾಗಿ ಮಕ್ಕಳ ಮೇಲೆ ದುಷ್ಪರಿಣಾಮ ಬೀರಿದೆ. ಈ ಸಂದರ್ಭದಲ್ಲಿ ಹೆಚ್ಚು ಜನರನ್ನು ಸೇರಿಸಿ ಪಾದಯಾತ್ರೆ ಮುಂತಾದವುಗಳನ್ನು ಮಾಡುವುದು ಸಾರ್ವಜನಿಕರ ಆರೋಗ್ಯ ದೃಷ್ಟಿಯಿಂದ ಸರಿ ಇರುವುದಿಲ್ಲ.
ಈಗಾಗಲೇ ಮಾನ್ಯ ಉಚ್ಚ ನ್ಯಾಯಾಲಯ ಕೂಡ ಇದರ ಬಗ್ಗೆ ತೀವ್ರವಾದ ಅಂತಹ ಅಭಿಪ್ರಾಯ ನೀಡಿದೆ. ಮತ್ತು ಇದು ಜನಾಭಿಪ್ರಾಯ ಕೂಡ ಆಗಿದೆ. ಹೀಗಾಗಿ ಪಾದಯಾತ್ರೆಯನ್ನು ಮುಂದುವರಿಸುವುದನ್ನು ಕೈಬಿಟ್ಟು ನಾವೆಲ್ಲ ಕೊರೊನಾವನ್ನು ಎದುರಿಸಿ ಮುಂಬರುವ ದಿನಗಳಲ್ಲಿ ಒಂದಾಗಿ ಮೇಕೆದಾಟು ಯೋಜನೆ ಅನುಷ್ಠಾನದ ಕುರಿತು ಕ್ರಮ ಕೈಗೊಳ್ಳೋಣ ಎಂದು ಬಸವರಾಜ್ ಬೊಮ್ಮಾಯಿ ಅವರು ಪ್ರತಿಪಕ್ಷ ನಾಯಕರಿಗೆ ಮನವಿ ಮಾಡಿದ್ದಾರೆ.