ಕೊರೊನಾ ಹೋಗಲಾಡಿಸಲು ಎಲ್ಲರ ಸಹಕಾರ ಅಗತ್ಯ: ಸಿಎಂ ಬೊಮ್ಮಾಯಿ

ಕರ್ನಾಟಕದ ನೆಲ, ಜಲ ಹಾಗೂ ಜನರ ಬಗ್ಗೆ ಯಾವಾಗಲೂ ಕೂಡ ಎಲ್ಲ ರಾಜಕೀಯ ಪಕ್ಷಗಳು ಒಂದಾಗಿ ಕೆಲಸ ಮಾಡಿದ್ದಾವೆ. ಮೇಕೆದಾಟು ವಿಚಾರದಲ್ಲಿ ಎಲ್ಲ ರಾಜಕೀಯ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಯೋಜನೆಯನ್ನು ಸಾಕಾರಗೊಳಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಸದ್ಯ ಕೋವಿಡ್ ಮಹಾಮಾರಿ 3 ನೇ ಅಲೆಯು ಕರ್ನಾಟಕ ರಾಜ್ಯಕ್ಕೆ ಹಾಗೂ ವಿಶೇಷವಾಗಿ ಬೆಂಗಳೂರಿಗೆ ಆವರಿಸಿಕೊಂಡಿದೆ. ಈ ಸಂದರ್ಭದಲ್ಲಿ ಕರ್ನಾಟಕ ಮತ್ತು ಬೆಂಗಳೂರು ಜನರ ಆರೋಗ್ಯ ಕಾಪಾಡುವುದು ನಮ್ಮೆಲ್ಲರ ಪ್ರಥಮ ಕರ್ತವ್ಯ ಆಗಿದೆ. ಹೀಗಾಗಿ ಈ ಕರ್ತವ್ಯವನ್ನು ನಿರ್ವಹಿಸಲು ಬದ್ಧತೆ ತೋರಿಸಬೇಕಾಗಿದೆ ಎಂದಿದ್ದಾರೆ.
ರಾಜ್ಯದಲ್ಲಿ ಕೋವಿಡ್ ಸಾಂಕ್ರಾಮಿಕ ರೋಗವನ್ನು ನಿಯಂತ್ರಿಸುವ ಕಾನೂನನ್ನು ಉಲ್ಲಂಘನೆ ಮಾಡದೇ ಎಲ್ಲರ ಸಹಕಾರವನ್ನು ಬಯಸುತ್ತೇನೆ. ಈ ಸಾಂಕ್ರಾಮಿಕ ರೋಗವನ್ನು ಕರ್ನಾಟಕ ಮತ್ತು ಬೆಂಗಳೂರಿನಲ್ಲಿ ನಿಯಂತ್ರಿಸಲು ಎಲ್ಲ ರೀತಿಯ ಕ್ರಮ ತೆಗೆದುಕೊಳ್ಳಲು ಸರಕಾರ ತೀರ್ಮಾನಿಸಿದೆ ಎಂದು ಹೇಳಿದ್ದಾರೆ.

Discover more from Valmiki Mithra

Subscribe now to keep reading and get access to the full archive.

Continue reading