ಬೆಂಗಳೂರು: ಜನವರಿ 26 ರಿಂದ ಮುಂದಿನ ಆದೇಶದ ವರೆಗೂ ನೈಸ್ ರಸ್ತೆಯಲ್ಲಿ ರಾತ್ರಿ ವೇಳೆ ದ್ವಿಚಕ್ರ ವಾಹನ ಸಂಚಾರಕ್ಕೆ ನೈಸ್ ಸಂಸ್ಥೆ ನಿರ್ಬಂಧ ಹೇರಿ ಆದೇಶ ಹೊರಡಿಲಾಗಿದೆ.
ನೈಸ್ ಸಂಸ್ಥೆ ಈ ಕುರಿತು ಮಾಧ್ಯಮ ಪ್ರಕಟಣೆ ಮಾಡಿದ್ದು, ಸುರಕ್ಷತಾ ಕಾರಣಗಳಿಂದಾಗಿ ರಾತ್ರಿ 10 ಗಂಟೆಯಿಂದ ಬೆಳಗಿನ ಜಾವ 5 ಗಂಟೆವರೆಗಿನ ಸಮಯದಲ್ಲಿ ನೈಸ್ ರಸ್ತೆಯಲ್ಲಿ ದ್ವಿಚಕ್ರ ವಾಹನಗಳ ನಿರ್ಬಂಧ ಹೇರಲಾಗಿದೆ ಎಂದು ತಿಳಿಸಿದೆ.