ಕೊಹ್ಲಿಯ ಹಠಾತ್ ರಾಜಿನಾಮೆ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಚರ್ಚೆಗಳು ಶುರುವಾಗಿದೆ. ಕೊಹ್ಲಿ ರಾಜಿನಾಮೆಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಬಿಸಿಸಿಐ ನೇರ ಕಾರಣ ಎಂದು ಕೆಲವರು ಆರೋಪಿಸಿದ್ದು, ಬಿಸಿಸಿಐ ವಿರುದ್ಧ ಆಕ್ರೋಶ ಹೆಚ್ಚುತ್ತಿದೆ. ಹೀಗಿರುವಾಗ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಕೊಹ್ಲಿ ಟೆಸ್ಟ್ ನಾಯಕತ್ವದಿಂದ ಕೆಳಗಿಳಿದ ಬಗ್ಗೆ ಮಾತನಾಡಿದ್ದಾರೆ.
ಸೌರವ್ ಗಂಗೂಲಿ ಅವರು ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಈ ಬಗ್ಗೆ ಬರೆದುಕೊಂಡಿದ್ದು, ‘ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಭಾರತೀಯ ಕ್ರಿಕೆಟ್ ತಂಡ ಎಲ್ಲ ಮಾದರಿಗಳಲ್ಲಿ ವೇಗವಾಗಿ ಬಹು ಎತ್ತರಕ್ಕೆ ದಾಪುಗಾಲು ಇಟ್ಟಿದೆ. ಟೆಸ್ಟ್ ತಂಡಕ್ಕೆ ರಾಜೀನಾಮೆ ಘೋಷಣೆ ಮಾಡಿರುವುದು ಅವರ ವೈಯಕ್ತಿಕ ನಿರ್ಧಾರ. ಕೊಹ್ಲಿ ಅವರ ಈ ನಿರ್ಧಾರವನ್ನು ಬಿಸಿಸಿಐ ಗೌರವಿಸುತ್ತದೆ.
ಭವಿಷ್ಯದಲ್ಲಿ ಭಾರತ ಕ್ರಿಕೆಟ್ ತಂಡ ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯುವಲ್ಲಿ ಕೊಹ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ. ಅವರೊಬ್ಬ ಶ್ರೇಷ್ಠ ಆಟಗಾರ. ವೆಲ್ ಡನ್, ಎಂದು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಟ್ವೀಟ್ ಮಾಡಿದ್ದಾರೆ.