ತೀರ್ಥಬಾವಿ: ಪ್ರತಾಪ್ ಗೌಡ ಪಾಟೀಲ್ ಫೌಂಡೇಶನ್ ವತಿಯಿಂದ ರಾಷ್ಟ್ರಮಟ್ಟದ ಓಟದ ಸ್ಪರ್ಧೆ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ಗೆದ್ದಂತಹ ಮಸ್ಕಿ ವಿಧಾನಸಭಾ ಕ್ಷೇತ್ರದ ತೀರ್ಥಬಾವಿ ಗ್ರಾಮದ ಬಡ ಕೂಲಿ ಕಾರ್ಮಿಕನ ಮಗಳಾದ ಕುಮಾರಿ ಕಮಲಾಕ್ಷಿ ಅವರಿಗೆ ನಮ್ಮ ಫೌಂಡೇಶನ್ ವತಿಯಿಂದ ಸನ್ಮಾನಿಸಿ ಕಿರು ಕಾಣಿಕೆಯನ್ನು ಸಲ್ಲಿಸಲಾಯಿತು.
ಅದೇ ರೀತಿ ಬಾಲಕಿಗೆ ತರಬೇತಿ ನೀಡಿದ ತರಬೇತುದಾರರಾದ ಲಕ್ಷ್ಮಣ ಅವರಿಗೂ ಕೂಡ ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಫೌಂಡೇಶನ್ ಅಧ್ಯಕ್ಷರಾದ ಪ್ರಸನ್ನ ಪಾಟೀಲ್ ಅವರು ಪ್ರತಿಭೆಗಳನ್ನು ಪ್ರೋತ್ಸಾಹಿಸುವಂತಹ ಕೆಲಸ ನಾವು ಮಾಡುತ್ತೇವೆ ನಿಮ್ಮೊಂದಿಗೆ ನಾವಿದ್ದೇವೆ ಅದೇ ರೀತಿ ಮುಂದಿನ ಅಂತರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಿ ಚಿನ್ನದ ಪದಕ ಗೆದ್ದು ನಮ್ಮ ತಾಲೂಕಿನ ಹೆಸರನ್ನು ಇನ್ನೂ ಎತ್ತರಕ್ಕೆ ಕೊಂಡೊಯ್ಯುವಲ್ಲಿ ಎಂದು ಶುಭ ಹಾರೈಸುತ್ತೇವೆ ಎಂದರು. ಇದೇ ಸಂದರ್ಭದಲ್ಲಿ ಫೌಂಡೇಶನ್ ನ ಸದಸ್ಯರುಗಳಾದ ಮಲ್ಲಿಕಾರ್ಜುನ ಬ್ಯಾಳಿ ಮೌನೇಶ ನಾಯಕ್ ಉಪಸ್ಥಿತರಿದ್ದರು.