ಧಾರವಾಡ: ಪ್ರತಿವರ್ಷದಂತೆ ಈ ವರ್ಷವೂ ಕೂಡ ಪ್ರಸಾರ ಭಾರತೀಯ ಸೌಹಾರ್ದ ಟ್ರಸ್ಟ್ ವತಿಯಿಂದ ಅನೇಕ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತದೆ. ಇದರ ಉದ್ದೇಶ ಇನ್ನು ಹೆಚ್ಚು ಸೇವೆಯನ್ನು ಮಾಡಲು ಪ್ರೋತ್ಸಾಹ ನೀಡುವುದು. ಹೀಗಾಗಿ ಈ ವರ್ಷವೂ ಕೂಡ ಟ್ರಸ್ಟ್ ನ ವತಿಯಿಂದ ಸಂಘಟನೆ ಕ್ಷೇತ್ರದಲ್ಲಿ ಸಾಧನೆ ಮಾಡಿದ ಗಾದಿಲಿಂಗಪ್ಪ ಏನ್.ಕೆ ಅವರಿಗೆ ಕರುನಾಡ ರಾಜ್ಯ ರತ್ನ ವಿಭೂಷಣ ಪ್ರಶಸ್ತಿಯನ್ನು ನೀಡಿ ಸನ್ಮಾನಿಸಲಾಗುತ್ತಿದೆ.
ಈ ನಾಡಿನ ಕಲೆ ಸಾಹಿತ್ಯ, ಸಾಂಸ್ಕೃತಿಕ ಕ್ಷೇತ್ರಕ್ಕೆ ತಾವು ನೀಡಿದ ಕೊಡುಗೆಯನ್ನು ಗುರುತಿಸಿ ತಮ್ಮನ್ನು ಕರುನಾಡು ನಕ್ಷತ್ರ, ರಾಜ್ಯ ರತ್ನ ವಿಭೂಷಣ ಪ್ರಶಸ್ತಿಗೆ ತಮ್ಮನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯನ್ನು ಧಾರವಾಡ ರಂಗಾಯಣದ ಸುವರ್ಣ ಸಾಂಸ್ಕೃತಿಕ ಸಮುಚ್ಚಯದಲ್ಲಿ ಫೆಬ್ರವರಿ 2ರಂದು ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಹೇಳಿದರು.
ಈ ಸಮಯದಲ್ಲಿ ಜೆ. ನಾಗರಾಜ ಪೂಜಾರ ಅಧ್ಯಕ್ಷರು ಪ್ರಸಾರ ಭಾರತಿ ಸೌಹಾರ್ದ ಟ್ರಸ್ಟ್, ಮತ್ತು ಪ್ರಧಾನ ಕಾರ್ಯದರ್ಶಿಗಳಾದ ಶ್ರೀಮತಿ ಪ್ರೇಮ ವೈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.