ಬೆಂಗಳೂರು: ಸಂಜೆ 4 ಗಂಟೆಗೆ ರಾಜ್ಯದ 31 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ವಿಡಿಯೋ ಕಾನರೆನ್ಸ್ ನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ ನಡೆಸಲಿದ್ದಾರೆ.
ಆಯಾ ಜಿಲ್ಲೆಗಳ ಕೋವಿಡ್ ಪ್ರಕರಣಗಳ ಸಂಖ್ಯೆ, ಸಾವಿನ ಪ್ರಮಾಣ, ಓಮಿಕ್ರಾನ್, ಪಾಸಿವಿಟಿ ದರ, ಆಸ್ಪತ್ರೆಯಲ್ಲಿ ಬೆಡ್‍ಗಳ ಲಭ್ಯತೆ, ಶಾಲಾಕಾಲೇಜುಗಳ ಸ್ಥಿತಿಗತಿಗಳ ಬಗ್ಗೆ ಮಾಹಿತಿ ಪಡೆಯಲಿದ್ದಾರೆ.
ನಿನ್ನೆಯಷ್ಟೇ ಸಚಿವರು ಮತ್ತು ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಜೊತೆ ಸಭೆ ನಡೆಸಿದ್ದ ಸಿಎಂ ಅವರು ಇಂದು ಜಿಲ್ಲಾಧಿಕಾರಿಗಳ ಜೊತೆ ಸಭೆ ನಡೆಸುತ್ತಿರುವುದು ಮಹತ್ವ ಪಡೆದುಕೊಂಡಿದೆ. ರಾಜ್ಯದಲ್ಲಿ ಕೊರೊನಾ ಸೋಂಕು ಈ ತಿಂಗಳ 25ಕ್ಕೆ ಉಚ್ಛ್ರಾಯ ಸ್ಥಿತಿಗೆ ತಲುಪಲಿದೆ ಎಂದು ತಾಂತ್ರಿಕ ಸಲಹಾ ಸಮಿತಿ ಸರ್ಕಾರಕ್ಕೆ ಎಚ್ಚರಿಸಿದೆ. ಅಲ್ಲಿಯವರೆಗೂ ಈಗಿರುವ ಯಾವುದೇ ನಿಯಮಗಳಲ್ಲಿ ಬದಲಾವಣೆ ಮಾಡದಂತೆ ಸಲಹೆಯನ್ನು ಮಾಡಿದೆ.