ನೀವು ಚಿನ್ನ ಖರೀದಿಸುವ ಪ್ಲ್ಯಾನ್ ಮಾಡುತ್ತಿದ್ದೀರಾ ದೇಶದ ಪ್ರಮುಖ ನಗರಗಳಲ್ಲಿ ಇಂದು ಚಿನ್ನಕ್ಕೆ ಎಷ್ಟು ಬೆಲೆ ಇದೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 49,070 ರೂ. ಇತ್ತು. ಇಂದು 130 ರೂ. ಹೆಚ್ಚಾಗಿ 49,200 ರೂ. ಆಗಿದೆ. ಅದೇ ರೀತಿ 22 ಕ್ಯಾರೆಟ್ 10 ಗ್ರಾಂ ಚಿನ್ನ ನಿನ್ನೆ 44,970 ರೂ. ಇತ್ತು. ಇಂದು 130 ರೂ. ಹೆಚ್ಚಾಗಿ 45,100 ರೂ. ಆಗಿದೆ. ಇನ್ನು, ರಾಜ್ಯದ ಇತರೆ ಪ್ರಮುಖ ನಗರಗಳಾದ ಮೈಸೂರು, ಮಂಗಳೂರಿನಲ್ಲೂ ಇದೇ ಬೆಲೆ ಇದೆ.
ದೇಶದ ಇತರೆ ನಗರಗಳಾದ ವಿಶಾಖಪಟ್ಟಣಂ, ವಿಜಯವಾಡ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಇಂದಿನ 24 ಕ್ಯಾರೆಟ್ ಚಿನ್ನದ ಬೆಲೆ 49 ಸಾವಿರದಿಂದ 50 ಸಾವಿರದ ಆಸುಪಾಸಿನಲ್ಲೇ ಇದೆ.
ಈ ಮಧ್ಯೆ, ದೇಶದ ಮೆಟ್ರೋ ನಗರಗಳಾದ ಚೆನ್ನೈನಲ್ಲಿ 49,560 ರೂ. ಇದ್ದರೆ, ಮುಂಬೈನಲ್ಲಿ 49,160 ರೂ., ದೆಹಲಿಯಲ್ಲಿ 51,500 ರೂ. ಹಾಗೂ ಕೋಲ್ಕತ್ತದಲ್ಲಿ 50,100 ರೂ. ಇದೆ. ಇದೇ ರೀತಿ ಚಂಡೀಗಢ, ಸೂರತ್, ನಾಶಿಕ್‌ನಲ್ಲೂ 24 ಕ್ಯಾರೆಟ್ ಚಿನ್ನದ ಬೆಲೆ 49 ಸಾವಿರದಿಂದ 50 ಸಾವಿರದ ಆಸುಪಾಸಿನಲ್ಲೇ ಇದೆ.