ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಜನರಿಗೆ ಮತ್ತೆ ಆತಂಕ ಶುರುವಾಗಿದೆ. ರೋಗ ನಿರೋಧಕ ಶಕ್ತಿ ಕಡಿಮೆ ಇರುವ ದೇಹಕ್ಕೆ ಮಹಾಮಾರಿ ಕೊರೊನಾ ಬೇಗ ಹೊಕ್ಕುತ್ತದೆ. ಹೀಗಾಗಿ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳುವುದು ಅನಿವಾರ್ಯವಾಗಿದೆ. ನೆಲ್ಲಿಕಾಯಿ ಮತ್ತು ಶುಂಠಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದರಿಂದ ಮಾಡುವ ಜ್ಯೂಸ್ ರೋಗ ನಿರೋಧಕ ಶಕ್ತಿ ಹೆಚ್ಚಿಸುವುದರಿಂದ, ಕೊರೊನಾ ಸೋಂಕಿನ ವಿರುದ್ಧ ಹೋರಾಡುತ್ತದೆ.
ನೆಲ್ಲಿಕಾಯಿ ಉತ್ಕರ್ಷಣ ನಿರೋಧಕಗಳಿಂದ ಸಮೃದ್ಧವಾಗಿದೆ. ಇದರಲ್ಲಿ ವಿಟಮಿನ್ ಸಿ ಇದೆ. ನೆಲ್ಲಿಕಾಯಿ ಮಧುಮೇಹವನ್ನು ನಿಯಂತ್ರಿಸುತ್ತದೆ. ಜೊತೆಗೆ ದೇಹದಲ್ಲಿರುವ ಕೆಟ್ಟ ಕೊಲೆಸ್ಟ್ರಾಲ್ನ ಕಡಿಮೆ ಮಾಡುತ್ತದೆ.
ಶುಂಠಿ ಕೆಮ್ಮು, ಗಂಟಲು ನೋವು ಮತ್ತು ಇತರ ಉರಿಯೂತದ ಕಾಯಿಲೆಗಳನ್ನು ನಿವಾರಿಸುವ ಶಕ್ತಿಯನ್ನು ಹೊಂದಿದೆ. ಇದರಲ್ಲಿ ಆ್ಯಂಟಿಆಕ್ಸಿಡೆಂಟ್ ಮತ್ತು ಜಿಂಗರೋನ್ ಇದ್ದು, ಇದು ಆರೋಗ್ಯಕ್ಕೆ ಹೆಚ್ಚು ಪ್ರಯೋಜನಕಾರಿ. ಅಲ್ಲದೇ ಶುಂಠಿ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ಪುದೀನ ಉರಿಯೂತ ಮತ್ತು ಸೋಂಕಿನ ವಿರುದ್ಧ ಹೋರಾಡುತ್ತದೆ. ಹಲವಾರು ಅಧ್ಯಯನಗಳ ಪ್ರಕಾರ, ಪುದೀನ ಉತ್ಕರ್ಷಣ ನಿರೋಧಕ ಮತ್ತು ಉರಿಯೂತವನ್ನು ನಿವಾರಿಸುತ್ತದೆ. ಇದು ಗಂಟಲು ನೋವು ಮತ್ತು ಕೆಮ್ಮಿನಿಂದ ತಕ್ಷಣದ ಪರಿಹಾರವನ್ನು ನೀಡುತ್ತದೆ. ಅಲ್ಲದೆ, ಇದರ ಪರಿಮಳ ತಲೆನೋವನ್ನು ಕಡಿಮೆಗೊಳಿಸುತ್ತದೆ.
ನೆಲ್ಲಿಕಾಯಿ- 5 ರಿಂದ 6 ಕಾಯಿ, ಶುಂಠಿ ರಸ – 1 ಚಮಚ, ಪುದೀನ ಎಲೆಗಳು – 3ರಿಂದ 4, ಜೇನುತುಪ್ಪ – 1 ಚಮಚ
ಎಲ್ಲಾ ಪದಾರ್ಥಗಳನ್ನು ಉಗುರು ಬೆಚ್ಚಗಿನ ನೀರಿನಿಂದ ತೊಳೆಯಿರಿ. ನೆಲ್ಲಿಕಾಯಿಯನ್ನು ಕತ್ತರಿಸಿ ಮಿಕ್ಸಿಗೆ ಹಾಕಿ. ಎಲ್ಲಾ ಪದಾರ್ಥಗಳನ್ನು ಸೇರಿಸಿ, ಚೆನ್ನಾಗಿ ಮಿಶ್ರಣ ಮಾಡಿ. ನೀವು ಚಾಟ್ ಮಸಾಲವನ್ನು ಕೂಡ ಸೇರಿಸಬಹುದು. ಆ ನಂತರ ಸಿದ್ಧವಾದ ಜ್ಯೂಸ್ನ ಕುಡಿಯಿರಿ.