ಮಾನ್ವಿ: ಬಿಜೆಪಿ ಮಂಡಲ ಅಧ್ಯಕ್ಷರಾದ ಮಲ್ಲಿಕಾರ್ಜುನ ಜಕ್ಕಲದಿನ್ನಿ ಅವರ ನೇತೃತ್ವದಲ್ಲಿ ಕವಿತಾಳ ಪಟ್ಟಣದಲ್ಲಿ ಮಾಸ್ಕ್ ವಿತರಣೆ ಮಾಡಲಾಯಿತು.
ಪಟ್ಟಣದ ವ್ಯಾಪ್ತಿಯಲ್ಲಿ ಸುಮಾರು 35 ಸಾವಿರ ಮಾಸ್ಕ್ ವಿತರಿಸಲಾಯಿತು. ಕೊರೋನಾ ವೈರಸ್ ಕುರಿತು ಮುಂಜಾಗ್ರತೆ ವಹಿಸಲು ಸಾರ್ವಜನಿಕರಿಗೆ ಜಾಗೃತಿ ಮೂಡಿಸಲಾಯಿತು. ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತಿ ಸದಸ್ಯರು, ಮಾಜಿ ಸದಸ್ಯರು, ಬಿಜೆಪಿ ಕಾರ್ಯಕರ್ತರು, ಕೆಎಸ್ಎನ್ ಅಭಿಮಾನಿ ಬಳಗದವರು ಉಪಸ್ಥಿತರಿದ್ದರು.