ಬೆಂಗಳೂರು: ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಆವರು, ತಾಂತ್ರಿಕ ಸಲಹಾ ಸಮಿತಿ ಸದಸ್ಯರ ಶಿಫಾರಸಿನಂತೆ ಕೆಲವು ನಗರಗಳಲ್ಲಿ ಶಾಲೆಗಳನ್ನು ಬಂದ್ ಮಾಡಲಾಗಿತ್ತು. ನಾಳೆ ನಡೆಯುವ ಸಭೆಯಲ್ಲಿ ಯಾವ ಸಲಹೆ ನೀಡುತ್ತಾರೋ ಅದರ ಮೇಲೆ ನಿರ್ಧಾರ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.
ನನ್ನ ವೈಯಕ್ತಿಕ ಅಭಿಪ್ರಾಯದಲ್ಲಿ ಹೇಳುವುದಾದರೆ ಮಕ್ಕಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಶಾಲೆಗಳನ್ನು ನಡೆಸುವುದೇ ಸೂಕ್ತವಾದ ಅಭಿಪ್ರಾಯ. ಮನೆಯ ಪಾಠಕ್ಕಿಂತ ಶಾಲೆಯಲ್ಲಿ ಕಲಿತರೆ ಹೆಚ್ಚು ಪರಿಣಾಮಕಾರಿಯಾಗುತ್ತದೆ ಎಂದು ಸಚಿವ ಬಿ.ಸಿ.ನಾಗೇಶ್ ಅಭಿಪ್ರಾಯಪಟ್ಟರು.
ಪ್ರಸ್ತುತ 1 ರಿಂದ 5 ವರ್ಷದೊಳಗಿನ 2250 ಮಕ್ಕಳು, ಅದೇ ರೀತಿ 5 ರಿಂದ 10ರೊಳಗಿನ 6762 ವಿದ್ಯಾರ್ಥಿಗಳು ಪದವಿ ಪೂರ್ವ ಹಂತದ 166 ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗೆ ಸೋಂಕು ಕಾಣಿಸಿಕೊಂಡಿದೆ ಎಂದು ಸಚಿವ ಬಿ.ಸಿ.ನಾಗೇಶ್ ಮಾಹಿತಿ ನೀಡಿದರು.