ಭಾರತದಲ್ಲಿ ಹೊಸದಾಗಿ 3,47,254 ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ದೃಢಪಟ್ಟಿದ್ದು, ಒಟ್ಟಾರೆ ಸೋಂಕು ಪ್ರಕರಣಗಳ ಸಂಖ್ಯೆ 3,85,66,027ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಇಂದು ಬೆಳಗ್ಗೆ ತಾಜಾ ಮಾಹಿತಿ ನೀಡಿದೆ.
ಸಕ್ರಿಯ ಪ್ರಕರಣಗಳ ಸಂಖ್ಯೆ 20,18,825ಕ್ಕೇರಿದೆ. ಇದು 235 ದಿನಗಳಲ್ಲೇ ಅತ್ಯಕ ಪ್ರಮಾಣವಾಗಿದೆ. ಕಳೆದ 24 ಗಂಟೆಗಳಲ್ಲಿ 703 ಮಂದಿ ಕೋವಿಡ್‍ಗೆ ಬಲಿಯಾಗುವುದರೊಂದಿಗೆ ಒಟ್ಟಾರೆ ಕೋವಿಡ್ ಮರಣಗಳ ಪ್ರಮಾಣ 4,88,396ಕ್ಕೆ ತಲುಪಿದೆ.
ರಾಷ್ಟ್ರೀಯ ಕೋವಿಡ್-19 ಚೇತರಿಕೆ ಪ್ರಮಾಣ ಶೇ.93.50ಕ್ಕೆ ಇಳಿದಿದೆ ಎಂದು ಸಚಿವಾಲಯ ಹೇಳಿದೆ. ಕಳೆದ ಒಂದು ದಿನದಲ್ಲಿ ಕೋವಿಡ್-19 ಸಕ್ರಿಯ ಪ್ರಕರಣಗಳ ಸಂಖ್ಯೆ 94,774ರಷ್ಟು ಏರಿಕೆಯಾಗಿದೆ.