ನವದೆಹಲಿ: ‘ಅಮರ್ ಜವಾನ್’ ಜ್ಯೋತಿಯನ್ನು ಯುದ್ಧ ಸ್ಮಾರಕ ಜ್ಯೋತಿಯೊಂದಿಗೆ ವಿಲೀನಗೊಳಿಸುವ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ರಾಹುಲ್ ಗಾಂಧಿ ಆಕ್ಷೇಪ ಮಾಡಿದ್ದಾರೆ
‘ನಮ್ಮ ವೀರ ಸೈನಿಕರಿಗಾಗಿ ಉರಿಯುತ್ತಿದ್ದ ಅಮರ ಜ್ಯೋತಿ ಇಂದು ಆರುತ್ತಿರುವುದು ಅತ್ಯಂತ ದುಃಖದ ಸಂಗತಿ. ಕೆಲವರಿಗೆ ದೇಶಭಕ್ತಿ ಮತ್ತು ತ್ಯಾಗವನ್ನು ಅರ್ಥಮಾಡಿಕೊಳ್ಳಲು ಸಾಧ್ಯವಿಲ್ಲ. ಪರವಾಗಿಲ್ಲ, ನಾವು ಮತ್ತೊಮ್ಮೆ ನಮ್ಮ ಸೈನಿಕರಿಗಾಗಿ ಅಮರ್ ಜವಾನ್ ಜ್ಯೋತಿ ಬೆಳಗಿಸುತ್ತೇವೆ’ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.