ಬೆಂಗಳೂರು: ಸದ್ಯ ರಾಜ್ಯದಲ್ಲಿ ಕೊರೊನಾ ರೌದ್ರ ನರ್ತನ ಮುಂದುವರಿಸಿದ್ದು, 40 ಸಾವಿರಕ್ಕೂ ಅಧಿಕ ಪ್ರಕರಣಗಳು ವರದಿ ಆಗುತ್ತಿವೆ. ಈ ನಡುವೆ ಸರ್ಕಾರ ವೀಕೆಂಡ್ ಕರ್ಫ್ಯೂ ರದ್ದುಗೊಳಿಸಿದೆ. ನೈಟ್ ಕರ್ಫ್ಯೂ ಮತ್ತು ಕಠಿಣ ನಿಯಮಗಳನ್ನು ಮುಂದುವರಿಸಿದೆ.
ಇದೀಗ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ಕೊರೊನಾ ಸೋಂಕು ತಗುಲಿದ್ದು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಶುಕ್ರವಾರ ರಾತ್ರಿ ದೇವೇಗೌಡರು ಆಸ್ಪತ್ರೆಗೆ ತೆರಳಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಹೆಚ್.ಡಿ.ದೇವೇಗೌಡರು ಶೀತ ಮತ್ತು ಜ್ವರದಿಂದ ಬಳಲುತ್ತಿದ್ದಾರೆ. ದೇವೇಗೌಡರ ಆರೋಗ್ಯ ಬಗ್ಗೆ ಹೆಚ್ಚಿನ ನಿಗಾ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.