ಬೆಂಗಳೂರು: ಇತ್ತೀಚೆಗಷ್ಟೇ ಹಾಲಿ ದರವನ್ನು ಪ್ರತಿ ಲೀಟರ್‍ಗೆ 3ರೂ., ವಿದ್ಯುತ್ ದರವನ್ನು ಯೂನಿಟ್‍ಗೆ 2 ರೂ. ಹಾಗೂ ನೀರಿನ ದರವನ್ನು ಹೆಚ್ಚಳ ಮಾಡಬೇಕೆಂದು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಇದಕ್ಕೆ ತೆರೆ ಎಳೆದಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ದರ ಏರಿಕೆಗಳ ಬಗ್ಗೆ ಯಾವುದೇ ತೀರ್ಮಾನವಾಗಿಲ್ಲ ಎಂದು ಸ್ಪಷ್ಟಪಡಿಸಿದರು.
ಹಾಲು, ನೀರು ಮತ್ತು ವಿದ್ಯುತ್ ದರ ಹೆಚ್ಚಳ ಮಾಡಲು ನನಗೆ ಪ್ರಸ್ತಾವನೆ ಸಲ್ಲಿಸಿರುವುದು ನಿಜ. ನಾವು ಎಲ್ಲಾ ಆಯಾಮಗಳಲ್ಲೂ ಚರ್ಚೆ ಮಾಡುತ್ತೇವೆ. ನಂತರವೇ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಸಿಎಂ ತಿಳಿಸಿದರು.ನಾವು ಯಾವುದೇ ಒತ್ತಡಕ್ಕೆ ಮಣಿಯದೆ ವಾರಾಂತ್ಯದ ಲಾಕ್‍ಡೌನ್‍ನನ್ನು ತೆರವುಗೊಳಿಸಿದ್ದೇವೆ. ಕೂಲಿಕಾರ್ಮಿಕರು, ಗಾರ್ಮೆಂಟ್ಸ್ ನೌಕರರು, ಆಟೋರಿಕ್ಷಾ, ಓಲಾ, ಊಬರ್, ಸರಕು ಸಾಗಾಣಿಕೆ, ಬೀದಿ ಬದಿ ವ್ಯಾಪರಿಗಳು, ಗುಡಿ ಕೈಗಾರಿಕೆಗಳು ಸೇರಿದಂತೆ ಯಾರೊಬ್ಬರಿಗೂ ಹೊರೆಯಾಗಬಾರದೆಂಬ ಕಾರಣಕ್ಕಾಗಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಯಿತು ಎಂದರು.