ಮುಂಬೈ: ವಸತಿ ಕಟ್ಟಡದ 18ನೇ ಮಹಡಿಯಲ್ಲಿ ಇಂದು ಬೆಳಗ್ಗೆ ಉಂಟಾದ ಭಾರಿ ಅಗ್ನಿ ಅನಾಹುತದಲ್ಲಿ ಕನಿಷ್ಠ 7 ಮೃತಪಟ್ಟು ಇತರ 17 ಮಂದಿ ಗಾಯಗೊಂಡಿದ್ದಾರೆ.
ಗೋವಾಲಿಯಾ ಟ್ಯಾಂಕ್‍ನ ಗಾಂ ಆಸ್ಪತ್ರೆ ಎದುರಿನ ಕಮ್ಲಾ ಕಟ್ಟಡದಲ್ಲಿ ಬೆಳಗ್ಗೆ ಸುಮಾರು 7 ಗಂಟೆಯಲ್ಲಿ ಬೆಂಕಿ ಹೊತ್ತುಕೊಂಡಿತು ಎಂದು ಬೃಹನ್ಮುಂಬೈ ಮಹಾನಗರ ಪಾಲಿಕೆಯ ಅಧಿಕಾರಿ ಹೇಳಿದ್ದಾರೆ.
ಇದು ನೆಲಮಹಡಿ ಮತ್ತು 20 ಅಂತಸ್ತುಗಳುಳ್ಳ ಕಟ್ಟಡ. 18ನೇ ಮಹಡಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಮಾಹಿತಿ ಲಭಿಸಿದೊಡನೆ ಅಗ್ನಿಶಾಮಕ ದಳ ಸಿಬ್ಬಂದಿ ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ.