ಬೆಂಗಳೂರು: ನಿರ್ಮಾಪಕ ಉಮಾಪತಿ ಹಾಗೂ ಇತರರ ಕೊಲೆಗೆ ಸಂಚು ರೂಪಿಸಿದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ದರ್ಶನ್ ಮತ್ತು ಸಂಜು ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಸುಂಕದಕಟ್ಟೆಯ ಬಾರ್‌ವೊಂದರ ಬಳಿ ಇರುವ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳ ವಿರುದ್ಧ ರಾಬರಿ, ಕಳವು, ಕೊಲೆ ಯತ್ನ, ಸುಲಿಗೆ ಸೇರಿದಂತೆ ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ಹತ್ತಾರು ಪ್ರಕರಣಗಳು ದಾಖಲಾಗಿವೆ. ಹೆಚ್ಚಿನ ತನಿಖೆಗಾಗಿ ಜಯನಗರ ಪೊಲೀಸರಿಗೆ ಆರೋಪಿಗಳನ್ನು ಒಪ್ಪಿಸಲಾಗಿದೆ ಎಂದು ಸಿಸಿಬಿ ಪೊಲೀಸರು ಹೇಳಿದರು.
ಸದಭಿರುಚಿಯ ಚಿತ್ರಗಳನ್ನು ನಿರ್ಮಿಸುವ ಉದ್ದೇಶದಿಂದ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟವರು ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡ