ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಮೊಮ್ಮಗಳು ಸೌಂದರ್ಯ ಆತ್ಮಹತ್ಯೆ.!

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮೊಮ್ಮಗಳು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೈದಿರುವುದಾಗಿ ವರದಿಯಾಗಿದೆ.
ಯಡಿಯೂರಪ್ಪ ಅವರ ಎರಡನೇ ಪುತ್ರಿ ಪದ್ಮಾವತಿ ಅವರ ಮಗಳು ಡಾ.ಸೌಂದರ್ಯ(30) ಮೃತಪಟ್ಟವರಾಗಿದ್ದಾರೆ.
ವಸಂತ ನಗರದಲ್ಲಿರುವ ಅವರ ಮನೆಯಲ್ಲಿ ಇಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಕುತ್ತಿಗೆಗೆ ನೇಣುಬಿಗಿದ ಸ್ಥಿತಿಯಲ್ಲಿ ಅವರು ಪತ್ತೆಯಾಗಿದ್ದಾರೆ.
ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಪ್ರಯೋಜನವಾಗಿಲ್ಲ ಎಂದು ತಿಳಿದುಬಂದಿದೆ.
ಡಾ.ಸೌಂದರ್ಯ ಅವರ ಪತಿ ಡಾ.ನೀರಜ್ ನಗರದ ರಾಮಯ್ಯ ಆಸ್ಪತ್ರೆಯಲ್ಲಿ ವೈದ್ಯರಾಗಿದ್ದು, ಅವರು ಕರ್ತವ್ಯಕ್ಕೆ ತೆರಳಿದ್ದ ವೇಳೆ ಆತ್ಮಹತ್ಯೆಗೈದಿದ್ದಾರೆ ಎಂದು ಹೇಳಲಾಗುತ್ತಿದೆ. ಡಾ.ಸೌಂದರ್ಯ ಕೂಡಾ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವೈದ್ಯೆಯಾಗಿದ್ದರು. ಇವರು 2018ರಲ್ಲಿ ವಿವಾಹಿತರಾಗಿದ್ದರು. ಸ್ಥಳಕ್ಕೆ ಹೈಗ್ರೌಂಡ್ಸ್ ಪೊಲೀಸರು ಭೇಟಿ ನೀಡಿದ್ದು, ಮೃತದೇಹವನ್ನು ನಗರದ ಬೌರಿಂಗ್ ಆಸ್ಪತ್ರೆಗೆ ರವಾನಿಸಲಾಗಿದೆ.

Discover more from Valmiki Mithra

Subscribe now to keep reading and get access to the full archive.

Continue reading