ಬೆಂಗಳೂರು : ಇಬ್ರಾಹಿಂ ಇನ್ನೂ ತೀರ್ಮಾನ ತೆಗೆದುಕೊಂಡಿಲ್ಲ. ಒತ್ತಡದಿಂದ ತೀರ್ಮಾನ ತೆಗೆದುಕೊಳ್ಳಲು ಆಗಲ್ಲ. ಹಿಂದಿನ ಕೆಲವು ಘಟನೆಗಳನ್ನು ಇಬ್ರಾಹಿಂ ನೋವಿನಿಂದ ಹೇಳಿಕೊಂಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು.
ಕಾಂಗ್ರೆಸ್ ತೊರೆಯುವುದಾಗಿ ಘೋಷಣೆ ಮಾಡಿರುವ ಕೇಂದ್ರದ ಮಾಜಿ ಸಚಿವ ಸಿಎಂ ಇಬ್ರಾಹಿಂ ಅವರೊಂದಿಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮಾತುಕತೆ ನಡೆಸಿದ್ದಾರೆ.
ಇಬ್ರಾಹಿಂ ಅವರ ನಿವಾಸಕ್ಕೆ ಭೇಟಿ ನೀಡಿ ಕೆಲಕಾಲ ಸಮಾಲೋಚನೆ ನಡೆಸಿದ್ದಾರೆ. ಆದರೆ, ಇಬ್ರಾಹಿಂ ಅವರು ಯಾವಾಗ ಜೆಡಿಎಸ್ ಸೇರಲಿದ್ದಾರೆ ಎಂಬುದನ್ನು ಬಹಿರಂಗಗೊಳಿಸಿಲ್ಲ. ಈ ನಡುವೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಬ್ರಾಹಿಂ ಕಾಂಗ್ರೆಸ್‍ನಲ್ಲೇ ಇರುತ್ತಾರೆ ಎಂದಿದ್ದಾರೆ.
2023ಕ್ಕೆ ಜೆಡಿಎಸ್ ಸರ್ಕಾರ ಬರುತ್ತದೆ ಎಂದು ಇಬ್ರಾಹಿಂ ಅವರು ಸ್ಪಷ್ಟ ಮಾತುಗಳಲ್ಲಿ ಹೇಳಿದ್ದಾರೆ. ನಮ್ಮ ಪಕ್ಷ ತಪ್ಪದೇ ಅಧಿಕಾರಕ್ಕೆ ಬರುತ್ತದೆ ಎಂದು ಹೆಚ್.ಡಿ.ಕುಮಾರಸ್ವಾಮಿ ಹೇಳಿದರು