ಮಾಜಿ ಸಚಿವರಾದ ಹೆಚ್.ಕೆ.ಪಾಟೀಲ್ ಅವರು ಸೇವಾಕೇಂದ್ರ ಆರಂಭ ಮಾಡಿದ್ದು, ಅದರ ಹೆಸರು ಬದಲಾಯಿಸಿರುವ ಬೊಮ್ಮಾಯಿ ಸರ್ಕಾರ ಗ್ರಾಮ-1 ಮಾಡಿದ್ದಾರೆ. ಇದೇನಾ ಇವರ ಸಾಧನೆನಾ ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ವ್ಯಂಗ್ಯ ಮಾಡಿದರು.
ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಮೂರು ಸಾವಿರ ಕೋಟಿ ರೂ. ಕೊಡ್ತೀವಿ ಎಂದು ಹೇಳಿದ್ದರು. ಆದರೆ ಕೊಟ್ಟಿದ್ದು ಒಂದು ಸಾವಿರ ಕೋಟಿ. ಈ ವರ್ಷ ಒಂದೇ ಒಂದು ರೂಪಾಯಿ ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಬಿಡುಗಡೆಯಾಗಿಲ್ಲ. ಕಲ್ಯಾಣ ಕರ್ನಾಟಕ ಅಂತ ಹೆಸರಿಟ್ಟಿದ್ದು ಇವರ ಸಾಧನೆ. ಎಲ್ ಕೆ ಅಡ್ವಾಣಿ ಅವರು 371 ಜೆ ಕೊಡಲು ಎಸ್.ಎಂ.ಕೃಷ್ಣ ಮನವಿ ಮಾಡಿದರೂ ನೀಡಿರಲಿಲ್ಲ. ಈಗ 371 ಜೆ ಬಗ್ಗೆ ಮತನಾಡುತ್ತಾರೆ. ಇವರಿಗೆ ಕಲ್ಯಾಣಕರ್ನಾಟಕದ ಬಗ್ಗೆ ಯಾವ ಕಾಳಜಿ ಇದೆ ಎಂದು ಬೊಮ್ಮಾಯಿ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಗುಡುಗಿದರು.
ಬಣ್ಣ ಬಣ್ಣದ ಜಾಹಿರಾತು ಕೊಟ್ಟು ಸುಳ್ಳು ಹೇಳ್ತಾರೆ. ಎರಡೂವರೆ ವರ್ಷದಲ್ಲಿ ಏನೇನು ಮಾಡಿದ್ದಾರೆ. ಇದರ ಬಗ್ಗೆ ಅವರು ಹೇಳಬೇಕಿತ್ತು, ಹೇಳಿಲ್ಲ. ಕೋವಿಡ್ ಬಗ್ಗೆ ಹೇಳಿಕೆ ಮೇಲೆ ಹೇಳಿಕೆ ಕೊಡ್ತಾರೆ. ಎರಡನೇ ಅಲೆಯಲ್ಲಿ ಏನು ಕೊಟ್ರು ಎಂದು ಪ್ರಶ್ನೆ ಮಾಡಿದರು.