ಮಾನ್ವಿ: ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಸನ್ಮಾನ ಶ್ರೀ ರಾಜಾ ವೆಂಕಟಪ್ಪ ನಾಯಕ ದೊರೆ ಅವರು ಜಾತ್ಯತೀತ ಜನತಾದಳ ಪಕ್ಷದ ಪರಿಶಿಷ್ಟ ಪಂಗಡ ಘಟಕದ ರಾಜ್ಯಾಧ್ಯಕ್ಷ ಸ್ಥಾನ ಸ್ವೀಕರಿಸಿ ಇಂದು ಮಾನ್ವಿ ನಗರಕ್ಕೆ ಆಗಮಿಸಿದರು.
ಜೆಡಿಎಸ್ ಎಲ್ಲಾ ಪುರಸಭೆ ಸದಸ್ಯರು ಹಾಗೂ ಜೆಡಿಎಸ್ ಪಕ್ಷದ ಎಲ್ಲಾ ಚುನಾಯಿತ ಜನಪ್ರತಿನಿಧಿಗಳು ಜೆಡಿಎಸ್ ಹಿರಿಯ ಮುಖಂಡರು ಹಾಗೂ ಯುವ ಮುಖಂಡರು ಹಾಗೂ ಅಪಾರ ಸಂಖ್ಯೆಯ ಕಾರ್ಯಕರ್ತರು ಅದ್ದೂರಿಯಾಗಿ ಸ್ವಾಗತಿಸಿದರು.
ತದನಂತರ ಮಾನ್ವಿ ಜನಪ್ರಿಯ ಶಾಸಕರು ವಾಲ್ಮೀಕಿ ಪುತ್ತಳಿಗೆ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು. ಬಸವ ವೃತ್ತ, ಅಂಬೇಡ್ಕರ್ ವೃತ್ತ, ಟಿಪ್ಪು ಸುಲ್ತಾನ್ ವೃತ್ತಗಳಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ತದನಂತರ ಕಚೇರಿಯ ಆಂಜನೇಯ ಹಾಗೂ ಜಗನ್ಮಾತೆ ಆದಿಶಕ್ತಿ ಶ್ರೀ ಚೌಡೇಶ್ವರಿ ದೇವಸ್ಥಾನಕ್ಕೆ ಪೂಜೆ ಸಲ್ಲಿಸಿ ದರ್ಶನ ಆಶೀರ್ವಾದ ಪಡೆದರು.