ಚಳ್ಳಕೆರೆ : ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹತ್ತಾರು ಯೋಜನೆಗಳಲ್ಲಿ ಒಂದಾದ ಗಂಗಾ ಕಲ್ಯಾಣ ಯೋಜನೆಯಡಿಯಲ್ಲಿ ಆಯ್ಕೆಯಾಗಿರುವ ಚಳ್ಳಕೆರೆ ತಾಲ್ಲೂಕು ಪರಶುರಾಂಪುರ ಹೋಬಳಿಯ ಫಲಾನುಭವಿಗಳಿಗೆ ಜಮೀನುಗಳಲ್ಲಿ ಬೋರ್ ವೆಲ್ ಕೊರೆಯುವ ಕಾರ್ಯಕ್ರಮಕ್ಕೆ ಚಳ್ಳಕೆರೆ ಕ್ಷೇತ್ರದ ಶಾಸಕರಾದ ಟಿ. ರಘುಮೂರ್ತಿರವರು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಪಾವಗಡ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ವೆಂಕಟರಮಣಪ್ಪರವರು, ಪರಶುರಾಂಪುರ ಗ್ರಾಮ ಪಂಚಾಯತಿಯ ಅಧ್ಯಕ್ಷರಾದ ಅನಿತಾ ವೆಂಕಟೇಶ್ ರವರು, ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ಪುಷ್ಪಲತಾರವರು, ತಾಲೂಕು ವ್ಯವಸ್ಥಾಪಕರಾದ ವಿಜಯಕುಮಾರ್ ರವರು ಹಾಗೂ ಸ್ಥಳೀಯ ಮುಖಂಡರುಗಳು ಉಪಸ್ಥಿತರಿದ್ದರು.