ಬೆಂಗಳೂರು: ನನ್ನ ಮೇಲೆ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಆರೋಪ ಮಾಡಲಾಗಿದೆ. ಸುಳ್ಳು ಆರೋಪ ಮಾಡಿದವರ ವಿರುದ್ಧ 3 ಕೋಟಿ ರೂ. ಮಾನನಷ್ಟ ಪ್ರಕರಣ ದಾಖಲಿಸಲಾಗುವುದು ಎಂದು ಐಪಿಎಸ್ ಅಧಿಕಾರಿ ರವಿ ಡಿ ಚನ್ನಣ್ಣನವರ್ ಹೇಳಿದ್ದಾರೆ.
ತನ್ನ ವಿರುದ್ಧ ಕೇಳಿ ಬಂದಿರುವ ಆರೋಪಗಳಿಗೆ ಚನ್ನಣ್ಣನವರ್ ಮಾಧ್ಯಮ ಹೇಳಿಕೆಯನ್ನು ಬಿಡುಗಡೆ ಮಾಡಿ ಸ್ಪಷ್ಟನೆ ನೀಡಿದ್ದಾರೆ.ಇತ್ತೀಚಿಗೆ ಸಾಮಾಜಿಕ ಜಾಲತಾಣಗಳಲ್ಲಿ ಕೆಲ ವ್ಯಕ್ತಿಗಳು ನನ್ನ ಮೇಲೆ ಮತ್ತು ನನ್ನ ಕುಟುಂಬದ ಮೇಲೆ ಆಧಾರರಹಿತ ಆರೋಪ ಮಾಡಿರುವುದು ನನ್ನ ಗಮನಕ್ಕೆ ಬಂದಿರುತ್ತದೆ.
ಇವೆಲ್ಲವೂ ಸುಳ್ಳಾಗಿದ್ದು, ದುರುದ್ದೇಶದಿಂದ ಕೂಡಿರುತ್ತವೆ. ಸಾಮಾಜಿಕ ಜಾಲತಾಣದಲ್ಲಿ, ನನ್ನ ತಂದೆ-ತಾಯಿಯವರ ಹೆಸರಲ್ಲಿರುವ ಕೆಲ ಪಹಣಿ ಹಾಕಿ, ಆರೋಪಿಸಿದ್ದು, ಅವುಗಳೆಲ್ಲ ಕಾನೂನು ಬದ್ಧವಾಗಿಯೇ ಖರೀದಿಸಿದ್ದೇನೆ. ಇವುಗಳು ಪಿತ್ರಾರ್ಜಿತ ಹಾಗೂ ಸ್ವಯಾರ್ಜಿತ ಆಸ್ತಿಗಳಾಗಿವೆ. ಅವುಗಳನ್ನೆಲ್ಲ ಆಯಾ ವರ್ಷವೇ ಆದಾಯ ತೆರಿಗೆ ಇಲಾಖೆಗೆ ಮಾಹಿತಿ ನೀಡಲಾಗಿದೆ.
