ವಿಶೇಷ ಅನುದಾನ ನೀಡಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಶಾಸಕ ರಮೇಶ್ ಜಾರಕಿಹೊಳಿ ಕೃತಜ್ಞತೆ

ಗೋಕಾಕ ಮತಕ್ಷೇತ್ರದ ರಸ್ತೆಗಳ ಅಭಿವೃದ್ಧಿಗಾಗಿ 31 ಕೋಟಿ ರೂ ಅಂತರ್ಜಲ ಹೆಚ್ಚಳ ಮಾಡಲು ಹಾಗೂ ಜಾನುವಾರುಗಳ ಕುಡಿಯುವ ನೀರಿಗಾಗಿ 19 ಕೋಟಿ ಮತ್ತು ಮಠಗಳ ಅಭಿವೃದ್ಧಿಗಾಗಿ 2 ಕೋಟಿ ರೂಗಳು ಸೇರಿ ಒಟ್ಟು 52 ಕೋಟಿ ರೂ ವಿಶೇಷ ಅನುದಾನ ಬಿಡುಗಡೆಯಾಗಿದೆ ಎಂದು ಶಾಸಕ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ.

ಕ್ಷೇತ್ರದಲ್ಲಿರುವ ಗ್ರಾಮೀಣ ರಸ್ತೆಗಳ ಸುಧಾರಣೆ ಗಾಗಿ ಪಂಚಾಯತ ರಾಜ್ಯ ಇಲಾಖೆಯ ಒಟ್ಟು 31 ಕೋಟಿ ರೂ ಗ್ರಾಮೀಣ ಪ್ರದೇಶದಲ್ಲಿ ಅಂತರ್ಜಲ ಪ್ರಮಾಣ ಹೆಚ್ಚಿಸಲು ಮತ್ತು ಜಾನುವಾರುಗಳ ಕುಡಿಯುವ ನೀರಿಗಾಗಿ ಬ್ರಿಡ್ಜ್ ಕಮ್ ಬ್ಯಾರೇಜ್ ನಿರ್ಮಾಣಕ್ಕೆ ಸಣ್ಣ ನೀರಾವರಿ ಇಲಾಖೆಯಿಂದ ಒಟ್ಟು 19 ಕೋಟಿ ರೂ ಮುಜರಾಯಿ ಇಲಾಖೆಯಿಂದ ಮಠಗಳ ಅಭಿವೃದ್ಧಿಪಡಿಸಲು ಮೂಲಭೂತ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಪ್ರತಿ ಮಠಗಳಿಗೆ ತಲಾ 25 ಲಕ್ಷ ರೂಗಳನ್ನು ನಗರದ ಶ್ರೀ ಶೂನ್ಯ ಸಂಪಾದನ ಮಠ, ಮರಡಿ ಮಠದ ಶ್ರೀ ಕಾಡಸಿದ್ದೇಶ್ವರ ಮಠ, ಸುಲದಾಳ ಶ್ರೀ ಜಡಿ ಸಿದ್ದೇಶ್ವರ ಮಠ, ಹಾಗೂ ಮಮದಾಪೂರದ ಶ್ರೀ ಚರಮೂರ್ತೇಶ್ವರ ಮಠ, ಸೇರಿ ಕ್ಷೇತ್ರದ 8 ಮಠಗಳಿಗೆ ಮುಜರಾಯಿ ಇಲಾಖೆಯಿಂದ ಒಟ್ಟು ಎರಡು ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿದೆ.
ಮುಂಬರುವ ದಿನಗಳಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಇನ್ನೂ ಹೆಚ್ಚಿನ ಅನುದಾನ ತರಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಶಾಸಕ ರಮೇಶ್ ಜಾರಕಿಹೊಳಿ ಅವರು ಹೇಳಿದ್ದಾರೆ.

ಗೋಕಾಕ ಮತಕ್ಷೇತ್ರದ ಗ್ರಾಮೀಣ ರಸ್ತೆಗಳ ಅಭಿವೃದ್ಧಿ, ಬ್ರಿಡ್ಜ್ ಕಂ ಬ್ಯಾರೇಜ್ ಹಾಗೂ ಮಠಗಳ ಅಭಿವೃದ್ಧಿಗಾಗಿ ಒಟ್ಟು 52 ಕೋಟಿ ರೂಗಳ ವಿಶೇಷ ಅನುದಾನ ನೀಡಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಶಾಸಕ ರಮೇಶ್ ಜಾರಕಿಹೊಳಿ ಅವರು ಕೃತಜ್ಞತೆ ತಿಳಿಸಿದ್ದಾರೆ.

Discover more from Valmiki Mithra

Subscribe now to keep reading and get access to the full archive.

Continue reading