ನಾವು ಅನೇಕ ಕಠಿಣ ಸವಾಲುಗಳನ್ನು ಎದುರಿಸುತ್ತಿದ್ದೇವೆ -ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ನೆಲ, ಜಲ ಹಾಗೂ ಭಾಷೆ ವಿಚಾರದಲ್ಲಿ ನಾವು ಅನೇಕ ಕಠಿಣ ಸವಾಲುಗಳನ್ನು ಎದುರಿಸುತ್ತಿದ್ದೇವೆ. ಇವುಗಳನ್ನು ಪರಿಣಾಮಕಾರಿಯಾಗಿ ಎದುರಿಸಬೇಕಾದರೆ ಎಲ್ಲ ಸಂಘಷಟನೆಗಳು ಒಟ್ಟಾಗಿ ಕೆಲಸ ಮಾಡಬೇಕಿದೆ. ಈ ನಿಟ್ಟಿನಲ್ಲಿ ಚರ್ಚೆ ಮಾಡಲು ಸಭೆ ಕರೆದಿದ್ದೇನೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದರು.

ರಾಜ್ಯದಲ್ಲಿ ಕನ್ನಡ ಸಂಘಟನೆಗಳ ಜತೆಗೆ ರೈತಪರ, ನೀರಾವರಿ ವಿಷಯಗಳನ್ನಿಟ್ಟುಕೊಂಡು ಹೋರಾಟ ನಡೆಸುತ್ತಿರುವ ಅನೇಕ ಸಂಘಟನೆಗಳದ್ದು, ಅವೆಲ್ಲವನ್ನೂ ಒಗ್ಗೂಡಿಸುವ ಕೆಲಸ ಮಾಡಲಾಗುವುದು ಎಂದು ಅವರು ಹೇಳಿದರು. ನಮ್ಮ ಸಮಸ್ಯೆಗಳ ಬಗ್ಗೆ ನಾವೇ ಹೋರಾಟ ನಡೆಸಿ ಸಾಧಿಸಿಕೊಳ್ಳಬೇಕಿದೆ. ಆ ಗುರಿ ಸಾಧನೆಗಾಗಿ ಪ್ರಾದೇಶಿಕ ರಾಜಕೀಯ ಶಕ್ತಿಯ ಅಗತ್ಯವಿದೆ.

ಇಂದು ಸುಮಾರು ನೂರೈವತ್ತಕ್ಕೂ ಹೆಚ್ಚು ಕನ್ನಡ ಮುಖಂಡರ ಜತೆ ಚರ್ಚೆ ನಡೆಸಿದ್ದೇನೆ. ಮುಂದಿನ ವಾರ ಬೆಂಗಳೂರಿನಲ್ಲಿ ಬೆಳಗ್ಗೆಯಿಂದ ಸಂಜೆವರೆಗೂ ಇವರೆಲ್ಲರ ಜತೆ ಮುಕ್ತವಾಗಿ ಮಾತುಕತೆ ನಡೆಸಲಿದ್ದೇನೆ. ಕನ್ನಡಿಗರ ನಿರುದ್ಯೋಗ ಸಮಸ್ಯೆ, ಖಾಸಗೀ ಹಾಗೂ ಕೇಂದ್ರ ಸರಕಾರದ ಮಟ್ಟದಲ್ಲಿ ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯ ಇತ್ಯಾದಿ ವಿಷಯಗಳ ಬಗ್ಗೆ ಮುಖಂಡರಿಂದ ಮಾಹಿತಿ ಪಡೆದು ಮುಂದಿನ ದಿನಗಳಲ್ಲಿ ರಾಜ್ಯವನ್ನು ಯಾವ ದಿಕ್ಕಿನಲ್ಲಿ ತೆಗೆದುಕೊಂಡು ಹೋಗಬೇಕು ಎನ್ನುವ ನಿಟ್ಟಿನಲ್ಲಿ ಪ್ರಾದೇಶಿಕ ಪಕ್ಷದ ಸರಕಾರ ತರುವ ದಿಸೆಯಲ್ಲಿ ಕಾರ್ಯಕ್ರಮ ರೂಪಿಸಲಾಗುವುದು ಕುಮಾರಸ್ವಾಮಿ ಹೇಳಿದರು.

Discover more from Valmiki Mithra

Subscribe now to keep reading and get access to the full archive.

Continue reading