ರಾಯಚೂರು: ಜಿಲ್ಲೆಯಲ್ಲಿ ಮಲ್ಲಿಕಾರ್ಜುನ ಗೌಡ ಎಂಬ ನ್ಯಾಯಾಧೀಶ ಡಾ.ಅಂಬೇಡ್ಕರ್ ಅವರಿಗೆ ಮಾಡಿದ ಅವಮಾನವನ್ನು ಖಂಡಿಸಿ ಬೈಲಹೊಂಗಲ್ ತಾಲ್ಲೂಕಿನಲ್ಲಿ ವಿವಿಧ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಈ ಸಂಧರ್ಭದಲ್ಲಿ ಯುವಕರು, ಪ್ರಗತಿಪರರು, ಹಾಗೂ ಹಿರಿಯ ಹೋರಾಟಗಾರರು ಸೇರಿಕೊಂಡು ಮೆರವಣಿಗೆ ಮಾಡುವ ಮೂಲಕ ಆತ ಮಾಡಿದ ನೀಚ ಕೃತ್ಯಕ್ಕೆ ಅವನಿಗೆ ತಕ್ಕ ಶಿಕ್ಷೆ ಆಗಬೇಕೆಂದು ಆಗ್ರಹಿಸಿ ಬೃಹತ್ ಪ್ರತಿಭಟನೆ ನಡೆಸಿ ಉಪ ವಿಭಾಗ ಅಧಿಕಾರಿಗಳು ಬೈಲಹೊಂಗಲ ಅವರಿಗೆ ಮನವಿ ಮಾಡಿಕೊಳ್ಳಲಾಯಿತು.